ಸಿಂದಗಿ: ಪಟ್ಟಣದ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ನ ಪ್ರಸಕ್ತ ಸಾಲಿನ ಸಿ.ಬಿ.ಎಸ್.ಸಿ ೧೦ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
೧೦ನೇ ತರಗತಿಯ ವಾಷೀಕ ಪರೀಕ್ಷೆಗೆ ಹಾಜರಾದ ಒಟ್ಟು ೬೨ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ೦೯ ವಿದ್ಯಾರ್ಥಿಗಳು, ೪೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ೧೧ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಶಾಲೆಯ ಒಟ್ಟು ಪಲಿತಾಂಶ ೧೦೦ಕ್ಕೆ ೧೦೦ರಷ್ಟಾಗಿದೆ.
ವಿದ್ಯಾರ್ಥಿನಿಯರ ಕಠಿಣ ಪರಿಶ್ರಮ, ಶಾಲೆಯ ಶಿಕ್ಷಕರ ಅತ್ಯುತ್ತಮ ಭೋಧನೆಯಿಂದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳನ್ನು ಪಡೆಯುವದರೊಂದಿಗೆ ಶಾಲೆಯ ಪಲಿತಾಂಶ ಶೇ.೧೦೦ಕ್ಕೆ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದು ನಮಗೆ ಬಹಳ ಹೆಮ್ಮೆ ತಂದಿದೆ ಎಂದು ಅಧ್ಯಕ್ಷ ವಿಠ್ಠಲ ಕೋಳೂರ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಸೇರಿದಂತೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯರಿಗೆ ಶುಭ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

