ತಿಕೋಟಾ: ತಾಲೂಕು ವ್ಯಾಪ್ತಿಯ ಲೋಹಗಾಂವ, ಬಾಬಾನಗರ, ಕನಮಡಿ ಮತ್ತು ಹೊನವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆರಂಭಿಸಲಾದ ಕೂಸಿನ ಮನೆಗಳಿಗೆ ನೂಡಲ್ ಅಧಿಕಾರಿಗಳು ಹಾಗೂ ವಿಜಯಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಗ್ರಾ), ಎಸ್.ಸಿ.ಮ್ಯಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆರಂಭಿಸಲಾದ ಕೂಸಿನ ಮನೆಗಳು ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲಕರವಾಗಿವೆ. ಗ್ರಾಮೀಣ ಭಾಗದ ಜನರು ತಮ್ಮ ೦೩ ವರ್ಷದೊಳಗಿನ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಟ್ಟು ನಿಶ್ಚಿಂತೆಯಿಂದ ಕೂಲಿ ಕೆಲಸಕ್ಕೆ ತೆರಳಲು ಈ ಕೇಂದ್ರಗಳು ಸಹಕಾರಿಯಾಗಿವೆ. ಈ ಕೇಂದ್ರದಲ್ಲಿ ಮಕ್ಕಳಿಗೆ ಆಟ ಪಾಠದ ಜೊತೆಗೆ ಪೌಷ್ಠೀಕ ಆಹಾರವನ್ನು ಒದಗಿಸಲಾಗುತ್ತಿದೆ ಎಂದರು.
ಶ್ರೀಮತಿ ಶೋಭಕ್ಕ ಶಿಳೀನ, ಸಹಾಯಕ ನಿರ್ದೇಶಕರು (ಗ್ರಾಉ&ಪಂರಾ) ತಾಲೂಕು ಪಂಚಾಯತಿ ತಿಕೋಟಾ ಅವರು ಮಾತನಾಡಿ ತಿಕೋಟಾ ತಾಲೂಕಿನಾದ್ಯಂತ ೧೦ ಕೂಸಿನ ಮನೆಗಳು ಮಂಜೂರಾಗಿದ್ದು ಸರಕಾರದ ನಿರ್ದೇಶನದಂತೆ ಎಲ್ಲಾ ಕೇಂದ್ರಗಳನ್ನು ಆರಂಭ ಮಾಡಲಾಗಿದೆ. ಮತ್ತು ಕೇಂದ್ರದ ಆರೈಕೆದಾರರು ಸಮೀಕ್ಷೆ ಮಾಡಿ ಮಕ್ಕಳನ್ನು ದಾಖಲು ಮಾಡಿಕೊಳ್ಳುತ್ತಿದ್ದು, ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಈ ಕೇಂದ್ರಗಳಲ್ಲಿ ದಾಖಲು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವ್ಹಿ.ಕೆ.ಹೊಸಮನಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಸುರೇಶ ಕಳ್ಳಿಮನಿ, ಶ್ರೀಮತಿ ಪದ್ಮಿನಿ ಬಿರಾದಾರ, ಶ್ರೀಮತಿ ರೇಣುಕಾ ಸೋಲಾಪುರ, ಶ್ರೀ ಮಹೇಶ ಕಗ್ಗೊಡದವರ, ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಕೂಸಿನ ಮನೆ ಆರೈಕೆದಾರರು, ಗ್ರಾಮ ಪಂಚಾಯತಿ ಸಿಬ್ಬಂದಿ ಸೇರಿ ಇತರರು ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

