ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಆಕ್ಷೇಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ದೂರಿದರು.
10ನೇ ತರಗತಿ ಪರೀಕ್ಷೆ ಬರೆದ 9 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕದಲ್ಲಿದ್ದಾರೆ. ಕೆಎಸ್‍ಇಎಪಿ ಮೂಲಕ ಪರೀಕ್ಷೆ ನಡೆಸಿದ್ದಾರೆ. ಯಶಸ್ವಿ ಪರೀಕ್ಷೆ ನಡೆಸಿದ್ದಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಅತ್ಯಂತ ಕೆಟ್ಟ ಪರೀಕ್ಷೆ ನಡೆದಿದ್ದರೆ ಅದು ಮಧು ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಎಂದು ಅವರು ವಿಷಾದದಿಂದ ತಿಳಿಸಿದ ಅವರು, ದಿಕ್ಕು ದೆಸೆಯಿಲ್ಲದ ಶಿಕ್ಷಣವನ್ನು ನಿರ್ಮಿಸಿದ್ದಾರೆ ಎಂದು ಶಹಾಪೂರ ಟೀಕಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

