Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕ್ಲೋಜರ್ ಕಾಮಗಾರಿ ನಡೆಸಲು (ಹೂಳು ಹಾಗೂ ಗಿಡಗಂಟಿಗಳ ತೆರವುಗೊಳಿಸುವ ಕಾರ್ಯ) ಅನುದಾನ ಇಲ್ಲದ ಕಾರಣ ಕಾಲುವೆಗಳನ್ನು ತುಂಬಿರುವ ಹೂಳು ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ವರ್ಷವೂ ಕೂಡ ಕ್ಲೋಜರ್ ಕಾಮಗಾರಿ ನಡೆಸಲಿಲ್ಲ ಇದಿರಂದ ಎಲ್ಲ ಕಾಲುವೆಗಳಲ್ಲಿ ಮಣ್ಣು ತುಂಬಿ ಗಿಡಗಂಟಿಗಳು ಬೆಳೆದಿವೆ. ಕಾಲುವೆಗಳಿಗೆ ನೀರು ಹರಿಸಿದ ಸಂದರ್ಭದಲ್ಲಿ ನೀರು ಮುಂದೆ ಸಾಗದೆ ಹೊಲಗಳಲ್ಲಿ ನೀರು ನುಗ್ಗಿ ಬೆಳೆ ಹಾಳಾಗಿ ಮಣ್ಣು ಕೂಡ ಕೊಚ್ಚಿ ಹೋಗುತ್ತಿದೆ. ಅದು ಅಲ್ಲದೇ ಕಾಲುವೆ ಕೊನೆ ಅಂಚಿನವರೆಗೆ ನೀರು ತಲುಪುವುದಿಲ್ಲ. ಇದರಿಂದ ಕೊನೆ ಅಂಚಿನಲ್ಲಿರುವ ರೈತರು ನೀರಿನಿಂದ ವಂಚಿತರಾಗುತ್ತಿದ್ದಾರೆ. ಮತ್ತು ಕೆರೆಗಳಿಗೂ ಕೂಡ ನೀರು ತಲುಪಿಲ್ಲ. ಇದರಿಂದ ಬೇಸಿಗೆ ಸಂದರ್ಬದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಕೆಬಿಜೆಎನ್ ಎಲ್ ಅಧಿಕಾರಿಗಳನ್ನು ಕೇಳಿದರೆ ಕ್ಲೋಜರ್ ಕಾಮಗಾರಿಗಳಿಗಾಗಿ ಹಣ ಬಿಡುಗಡೆಗೊಳಿಸಲು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಂಡರು ಅನುದಾನ ಕೊಡುತ್ತಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ವರ್ಷವೂ ಕಾಲುವೆಗಳ ನಿರ್ವಹಣಾ ವೆಚ್ಚವನ್ನು ಕಡ್ಡಾಯವಾಗಿ ರಾಜ್ಯ ಸರ್ಕಾರ ಕೊಡಬೇಕು. ಆದರೆ ಸರ್ಕಾರವು ಈ ವರ್ಷವು ಕೂಡ ಕ್ಲೋಜರ್ ಕಾಮಗಾರಿಗೆ ಹಣ ನೀಡದೆ ಆರ್ಥಿಕ ಮಿತವ್ಯಯದ ನೆಪ ಹೇಳುತ್ತಿದೆ. ಇದರಿಂದ ಕ್ಲೋಜರ್ ಕಾಮಗಾರಿ ನಡೆಯುವುದು ಅನುಮಾನವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಾಲುವೆಗಳ ಕ್ಲೋಜರ್ ಕಾಮಗಾರಿ ನಡೆಸಲು ಅದಕ್ಕೆ ತಗಲುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸದಾಶಿವ ಬರಟಗಿ, ಹೊನಕೇರೆಪ್ಪ ತೆಲಗಿ, ಗುರಲಿಂಗಪ್ಪ ಪಡಸಲಗಿ, ಬಸವರಾಜ ಜಂಗಮಶೆಟ್ಟಿ, ಸಿಕಂದರ ಕರ್ಜಗಿ, ಸಂಪತ್‌ಕುಮಾರ ಕುಲಕರ್ಣಿ, ಸಂಜೀವ ಕುಲಕರ್ಣಿ, ಗುರುರಾಜ ಕುಲಕರ್ಣಿ, ದಾವಲಸಾಬ ನಧಾಪ್, ಗಿರಮಲ್ಲಪ್ಪ ದೊಡಮನಿ, ಚನಬಸಪ್ಪ ಸಿಂಧೂರ, ಪ್ರಹ್ಲಾದ ನಾಗರಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.