Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಆರೋಗ್ಯ ಸರಿ ಇರದ ದೇಶದಲ್ಲಿ ಆರ್ಥಿಕ ಬೆಳವಣಿಗೆ ಸಾಧ್ಯವಿಲ್ಲ
(ರಾಜ್ಯ ) ಜಿಲ್ಲೆ

ಜನರ ಆರೋಗ್ಯ ಸರಿ ಇರದ ದೇಶದಲ್ಲಿ ಆರ್ಥಿಕ ಬೆಳವಣಿಗೆ ಸಾಧ್ಯವಿಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೋಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಅಭಿಮತ

ವಿಜಯಪುರ: ನಾವು ಆರೋಗ್ಯಕರ ಆಹಾರ ಸೇವಿಸುವದಕ್ಕಿಂತ ಹೆಚ್ಚಾಗಿ ಅನಾರೋಗ್ಯಕರ ಆಹಾರ ಪದ್ಧತಿಯಿಂದ ತಲಾ ಸರಸರಿ ರೂ.150 ಗಳನ್ನು ಪ್ರತಿ ನಿತ್ಯ ಔಷಧಿ ಸೇವನೆಗಾಗಿ ಖರ್ಚು ಮಾಡುತ್ತಿದ್ದೇವೆ ಎಂದು ಕೋಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.
ಬಬಲೇಶ್ವರ ತಾಲೂಕಿನ ಕಂಬಾಗಿಯಲ್ಲಿ ಮಧುರಾ ಆಯಿಲ್ ಇಂಡಸ್ಟ್ರೀಸ್‍ನಲ್ಲಿ ಕಟ್ಟಿಗೆ ಗಾಣದಿಂದ ಕುಸಬಿ, ಶೇಂಗಾ ಮತ್ತು ಕೊಬ್ಬರಿ ಎಣ್ಣೆ ಉತ್ಪಾದಿಸುವ ಘಟಕವನ್ನು ಆರಂಭಿಸಿ ಮಾತನಾಡಿದ ಅವರು, ಯಾವ ದೇಶದಲ್ಲಿ ಜನರ ಆರೋಗ್ಯ ಸರಿ ಇರುವುದಿಲ್ಲವೋ ಆ ದೇಶದ ಆರ್ಥಿಕ ಬೆಳವಣಿಗೆ ಸಾಧ್ಯವಿಲ್ಲ. ರಿಫಾಯಿನ್ಡ್ ಎಣ್ಣೆ ಬಳಸುವದರಿಂದ ಮಧುಮೇಹ, ಹೃದಯ ರೋಗ, ಕ್ಯಾನ್ಸರ್ ಕಾಯಿಲೆಗಳು ಹೆಚ್ಚಾಗಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪ್ಯಾರಲೈಸಿಸ್ ಕಾಯಿಲೆಗೆ ನಾವು ಬಳಸುತ್ತಿರುವ ಎಣ್ಣೆ ಕೂಡ ಕಾರಣ ಆಗಿದೆ ಎಂದರು.
ಒಂದು ಲೀಟರ್ ಶೇಂಗಾ ಎಣ್ಣೆ ತಯಾರಿಸಲು 3 ಕೆ.ಜಿ ಶೇಂಗಾ ಕಾಳುಗಳು ಬೇಕು. 3 ಕೆ.ಜಿ ಶೇಂಗಾ ಕಾಳುಗಳ ಬೆಲೆ ರೂ.330 ಆಗುತ್ತದೆ. ಹಾಗಿದ್ದರೆ ರೂ.110 ಗೆ ಶೇಂಗಾ ಎಣ್ಣೆ ಮಾರುಕಟ್ಟೆಯಲ್ಲಿ ಸಿಗಲು ಹೇಗೆ ಸಾಧ್ಯ? ಇದರಲ್ಲಿ ಮಿಕ್ಸಿಂಗ್ ಇದೆ. ನಾವು ಬಳಸುವ ಪ್ರತಿಯೊಂದು ಪದಾರ್ಥಗಳಲ್ಲಿಯೂ ಮಿಕ್ಸಿಂಗ್ ಇದೆ. ಐಸ್‍ಕ್ರೀಂ ತಯಾರಿಸಲು ದನದ ಕೊಬ್ಬನ್ನು ಬಳಸುತ್ತಾರೆ. ನಾವು ಬಾಯಿ ಚಪ್ಪರಿಸಿ ಸೇವಿಸುತ್ತೇವೆ. ತರಕಾರಿ ಮಾರುವವರು ಕೂಡ ತಾವು ಬೆಳೆದ ತರಕಾರಿಯನ್ನು ಸೇವಿಸುವುದಿಲ್ಲ. ಬದಲಿಗೆ ಮಾರಾಟ ಮಾಡುತ್ತಾರೆ. ಏಕೆಂದರೆ ಅದಕ್ಕೆ ಅಷ್ಟೊಂದು ರಾಸಾಯನಿಕ ಸಿಂಪಡಿಸಿರುತ್ತಾರೆ. ಆ ವಿಷವನ್ನು ನಾವು ಪ್ರತಿನಿತ್ಯ ತಿನ್ನುತ್ತೇವೆ. ಪ್ರತಿಯೊಬ್ಬರು ತಾವು ತಿನ್ನುವ ತರಕಾರಿಯನ್ನು ಮತ್ತು ಬಳಸುವ ಕಾಳು-ಕಡಿಗಳನ್ನು ತಾವೇ ಸ್ವತಃ ರಾಸಾಯನಿಕ ಮುಕ್ತವಾಗಿ ಬೆಳೆದುಕೊಳ್ಳಬೇಕು ಎಂದು ಶ್ರೀಗಳು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಮಹಾಂತೇಶ ಬಿರಾದಾರ, 30 ವರ್ಷಗಳಿಂದಿಚೆಗೆ ಹೃದಯ ರೋಗಿಗಳ ಮತ್ತು ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಅದರ ತಕ್ಕಂತೆ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಿ ರಾಜ್ಯ ಮಧುಮೇಹಿಗಳ ರಾಜಧಾನಿ ಎನಿಸಿಕೊಂಡಿದೆ. ಇದಕ್ಕೆ ಆಹಾರ ಪದ್ಧತಿಯೇ ಕಾರಣವಾಗಿದೆ ಎಂದರು.
ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಅಪ್ಪು ಪಟ್ಟಣಶೆಟ್ಟಿ ಮಾಜಿ ಶಾಸಕ ಆನಂದ ನ್ಯಾಮಗೌಡ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಕೆ.ಎಚ್.ಮುಂಬಾರೆಡ್ಡಿ, ಸಂಗಮೇಶ ಬಬಲೇಶ್ವರ, ಶ್ರೀಶೈಲಗೌಡ ಪಾಟೀಲ ನಿಡೋಣಿ ಈ ಸಂದರ್ಭದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮಧುರಾ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಉಮೇಶ ಮಲ್ಲಣ್ಣನವರ ಸನ್ಮಾನಿಸಿದರು. ಮರೇಗುದ್ದಿ ನಿರುಪಾಧೀಶ ಮಹಾಸ್ವಾಮಿಗಳು, ಶಿರೋಳ ಶಂಕರಾರೂಢ ಮಹಾಸ್ವಾಮಿಗಳು, ಮಮದಾಪುರ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು, ಗುಣದಾಳ ಡಾ.ವಿವೇಕಾನಂದ ದೇವರು, ನಾವದಗಿ ಶ್ರೀಶೈಲ ಸ್ವಾಮಿಗಳು, ಕಂಬಾಗಿ ಚನ್ನಬಸಯ್ಯ ಹಿರೇಮಠ ವೇದಿಕೆಯಲ್ಲಿದ್ದರು. ಎಸ್.ಎಂ.ಸೊನ್ನದ ಸ್ವಾಗತಿಸಿದರು, ಸುಭಾಷಚಂದ್ರ ಕನ್ನೂರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.