ವಿಜಯಪುರ: ಒಂದು ದೇಶದ ಅಭಿವೃದ್ಧಿ ಅಲ್ಲಿನ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ಸದೃಡ ದೇಶ ಕಟ್ಟುವಲ್ಲಿ ಕಾರ್ಮಿಕರು ಶ್ರಮ ಅಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿಗಳಾದ ಸಂತೋಷ ಎಸ್. ಕುಂದರು ಹೇಳಿದರು.
ಅವರು ಬುಧವಾರ ನಗರದ ಶಿವಗಿರಿ ರಸ್ತೆಗೆ ಇರುವ ಲೊಯೋಲ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಲೊಯೋಲ ಕೈಗಾರಿಕಾ ತರಭೇತಿ ಸಂಸ್ಥೆ ಹಾಗೂ ಬಿಜಾಪುರ ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್(ರಿ), ವಿಜಯಪುರ ಇವರ ಆಶ್ರಯದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ-೨೦೨೪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಬೆಳವಣಿಗೆಗೆ ಕಾರ್ಮಿಕರ ಕೊಡುಗೆ ಅನನ್ಯವಾಗಿದೆ. ಕಾರ್ಮಿಕರಿಗೆ ಏನಾದರೂ ತೊಂದರೆ ಊಂಟಾದರೆ ಉಚಿತ ಕಾನೂನು ಸೇವಾ ಪ್ರಾಧಿಕಾರಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಫಾದರ್ ಟಿಯೋಲ್ ಮಚಾದೋ ಪ್ರಾಸ್ತಾವಿಕವಾಗಿ ಮಾತನಾಡಿ, ಹಲವಾರು ಯೋಜನೆಗಳು ಕಾರ್ಮಿಕರಿಗಿದ್ದು, ಅವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕೆಂದು ತಿಳಿಸಿದಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಎಸ್ ಜಿ ಖೈನೂರ, ಶ್ರೀಮತಿ ಜಗದೇವಿ ಸಜ್ಜನ, ಕಾರ್ಮಿಕ ನೀರಿಕ್ಷರು, ೨ನೇ ವೃತ್ತ, ವಿಜಯಪುರ ಐ.ಟಿ.ಐ. ಕಾಲೇಜನ ಪ್ರಾಂಶುಪಾಲರಾದ ಫಾದರ್ ಆ್ಯಂಟನಿ ಲಾರೆನ್ಸ್ ವೇಧಿಕೆಯ ಮೇಲೆ ಅಸಿನರಾದ್ದರು.
ಕಾರ್ಯಕ್ರಮದಲ್ಲಿ ವಿಜಾಪುರ ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್‌ನ ಪದಾಧಿಕಾರಿಗಳು ಮತ್ತು ವಿವಿಧ ಸ್ಥಳೀಯ ಕಾರ್ಮಿಕ ಸಂಘಗಳಿಂದ ಪುರುಷ ಮತ್ತು ಮಹಿಳಾ ಕಾರ್ಮಿಕರು ಮತ್ತು ಲೊಯೋಲ ತಾಂತ್ರಿಕ ತರಬೇತಿ ಶಾಲೆಯ ಮಕ್ಕಳು, , ಶಿಕ್ಷಕರು, ಒಟ್ಟು ೧೨೦ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ತರ :ನ್ಯಾ.ಕುಂದರ್
Related Posts
Add A Comment

