ವಿಜಯಪುರ: ಅಲ್ಪ ಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌಧ್ಧ, ಪಾರ್ಸಿ ಮತ್ತು ಸಿಖ್) ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ/ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು, ಸರ್ಕಾರಿ ಮುಸ್ಲಿಂ ವಸತಿ ಶಾಲೆ/ಕಾಲೇಜು, ಮತ್ತು ಇಂಟಿಗ್ರೇಟೆಡ್ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಪ್ರಥಮ ಪಿಯುಸಿ (ವಿಜ್ಞಾನ ಹಾಗೂ ವಾಣಿಜ್ಯ) ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಮೇ.೨೭ ಕೊನೆಯ ದಿನವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.೭೫ರಷ್ಟು ಪ್ರವೇಶ ಮೀಸಲಿರಿಸಿದೆ. ವೀಕಲಚೇತನರಿಗೆ ಶೇ.೩ರಷ್ಟು, ಪ.ಜಾತಿ, ಪ.ಪಂಗಡ ಹಾಗೂ ಹಿಂದೂಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.೨೫ರಸ್ಟು ಪ್ರವೇಶಾತಿ ಮೀಸಲಿರಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ನೋಟ್‌ಬುಕ್, ಲೇಖನಿ ಸಾಮಗ್ರಿಗಳು, ಸ್ಕೂಲ್ ಬ್ಯಾಗ್ ಹಾಗೂ ಊಟ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಅರ್ಜಿಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾಧ ಭವನ, ಜಿಲ್ಲಾ ಪಂಚಾಯತ್, ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೨೯೫೫೨೩, ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಅರಕೇರಿ ಮೊ: ೯೫೯೧೬೧೨೦೭೩, ಸಿಂದಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ: ೯೯೮೦೯೫೨೯೬೦ ಹಾಗೂ ಚಡಚಣ ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಮೊ: ೯೬೨೦೮೨೮೧೮೫, ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: ೭೮೯೨೩೭೧೭೦೯, ಮುದ್ದೇಬಿಹಾಳ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: ೯೮೪೪೪೯೩೩೦೬, ಮುದ್ದೇಬಿಹಾಳ ನಂ೨ರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: ೭೨೫೯೧೭೯೩೯೮, ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆ ಮೊ:೮೩೧೦೮೩೦೪೦೭ ಸಂಖ್ಯೆಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಂಖ್ಯಾತರ ಸಹಾಯವಾಣಿ ೮೨೭೭೭೯೯೯೯೦ಗೆ ಕರೆ ಮಾಡಬಹುದು ಎಂದು ವಿಜಯಪುರ ಅಲ್ಪಸಂಖ್ಯಾತರ ಕಲ್ಯಾಣ ಇಲಾಕೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
