Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕೊಸಂಬೆ ಆಕ್ರೋಶ
(ರಾಜ್ಯ ) ಜಿಲ್ಲೆ

ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕೊಸಂಬೆ ಆಕ್ರೋಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯುಜಿಡಿ ಸಂಸ್ಕರಣಾ ಘಟಕದಲ್ಲಿ ಮಕ್ಕಳ ಸಾವು ಪ್ರಕರಣ | ಘಟನಾ ಸ್ಥಳಕ್ಕೆ ಮಕ್ಕಳ ಆಯೋಗದ ಸದಸ್ಯರ ಭೇಟಿ

ಮುದ್ದೇಬಿಹಾಳ: ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿ ಮೇ 13 ರಂದು ಇಂಡಿ‌ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾಸ್ಥಳಕ್ಕೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೊಸಂಬೆ ಹಾಗೂ ಶೇಖರಗೌಡ ರಾಮತನಾಳ ಭೇಟಿ ನೀಡಿ ಘಟಕದಲ್ಲಿ ರಕ್ಷಣಾ ವ್ಯವಸ್ಥೆಯ ಸ್ಥಿತಿಗತಿಗಳನ್ನು ಪರಿಶೀಲಿಸಿ, ಮೃತಪಟ್ಟ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು.
ಯುಜಿಡಿ ಮಲಿನ ನೀರು ಸಂಸ್ಕರಣಾ ಘಟಕದಲ್ಲಿ ಖುದ್ಧು ಪರೀಶೀಲನೆ ನಡೆಸಿದ ಆಯೋಗದ ಸದಸ್ಯ ಕೋಸಂಭೆ ಹಾಗೂ ರಾಮತನಾಳ ಅವರು, ಮುಖ್ಯರಸ್ತೆಗೆ ಹೊಂದಿಕೊಂಡಿರುವ ಘಟಕದ ಸುತ್ತಲ್ಲೂ ಯಾವುದೇ ತಂತಿಬೇಲಿ, ತಡೆಗೋಡೆ ನಿರ್ಮಿಸದಿರುವುದು, ಕನಿಷ್ಠ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಹಾಗೂ ಸೂಕ್ತ ಸಿಬ್ಬಂದಿ ನಿಯೋಜಿಸದ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೂರು ಮಕ್ಕಳ‌ ಸಾವಿಗೆ ಪಾಲಿಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಗರಂ ಆದರು.
ಈ ವೇಳೆ ಸ್ಥಳದಲ್ಲಿದ್ದ ಸುದ್ದಿಗಾರರೊಂದಿಗೆ ಆಯೋಗದ ಸದಸ್ಯ ಶಶಿಧರ್ ಕೋಸಂಭೆ ಮಾತನಾಡಿ, ಒಂದು ವಾರದಲ್ಲಿ ಸಂಸ್ಕರಣಾ ಘಟಕದ ಸುತ್ತಲೂ ತಂತಿ ಬೇಲಿ ಹಾಗೂ ಗೇಟ್ ಹಾಕಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಸೂಕ್ತ ಸಿಬ್ಬಂದಿ ನಿಯೋಜಿಬೇಕು. ಮೃತ ಮಕ್ಕಳ ಕುಟುಂಬಕ್ಕೆ ಪಾಲಿಕೆಯಿಂದ ತ್ವರಿತ ಹಾಗೂ ಗರಿಷ್ಠ ಆರ್ಥಿಕ‌ ಪರಿಹಾರ ನೀಡಬೇಕೆಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಒಂದು ವಾರದ ಒಳಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಆಯೋಗ ಶಿಘಾರಸ್ಸು ಮಾಡಲಿದೆ. ಅಲ್ಲದೇ ಈ ಕುರಿತು ಸರ್ಕಾರಕ್ಕೂ ವರದಿ ಸಲ್ಲಿಸಲಾಗುತ್ತದೆ. ಅಲ್ಲದೇ ಪ್ರಕರಣ ಕುರಿತು‌ ಮಕ್ಕಳ‌ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಆಯೋಗ ಬದ್ಧವಾಗಿದೆ ಎಂದು ತಿಳಿಸಿದರು.
ಆಯೋಗದ ಇನ್ನೋರ್ವ ಸದಸ್ಯ ಶೇಖರಗೌಡ ರಾಮತನಾಳ ಮಾತನಾಡಿ, ಸ್ಥಳೀಯರ ಒತ್ತಾಯ ಹಾಗೂ ಮಕ್ಕಳ‌ ಸಾವಿನ ಘಟನೆ ಗಮನಿಸಿದರೆ ನಗರದ ಮಧ್ಯಭಾಗದಲ್ಲಿರುವ ಈ ಯುಜಿಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ಬೇರೆಡೆ ಸ್ಥಳಾಂತರ ಮಾಡುವುದು ಸೂಕ್ತ. ಈ‌ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಚರ್ಚಿಸಲು ಸೂಚಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಆಯೋಗದ ಸದಸ್ಯರಾದ ಶಶಿಧರ ಕೋಸುಂಬೆ ಹಾಗೂ ಶೇಖರಗೌಡ ರಾಮತನಾಳ ಸ್ಥಳದಲ್ಲಿದ್ದ ಮೃತ ಮಿಹಿರ್ ಮಗುವಿನ ತಂದೆ ಶ್ರೀಕಾಂತ್ ಜನಗೌಳಿ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು. ಮೂವರು ಮಕ್ಕಳ‌ ಸಾವು ಪ್ರಕರಣ ಇಡಿ ನಾಗರಿಕ ಸಮಾಜ ತೆಲೆ ತಗ್ಗಿಸುವಂತಹದು. ಪಾಲಿಕೆ ವತಿಯಿಂದ ಗರಿಷ್ಠಮಟ್ಟದ ಆರ್ಥಿಕ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಆಯೋಗ ಸದಾ ನಿಮ್ಮೊಂದಿಗಿರುತ್ತದೆ ಎಂದು ಕುಟುಂಬ ಸದಸ್ಯರಿಗೆ ಸೂಕ್ತ ನ್ಯಾಯ ಕೊಡಿಸುವ ಭರವಸೆ ವ್ಯಕ್ತಪಡಿಸಿದರು.
ಈ ವೇಳೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು, ಪಾಲಿಕೆ, ಆರೋಗ್ಯ, ಪೊಲೀಸ್ ಇಲಾಖೆಗಳು, ಜಿಲ್ಲಾ‌ ಮಕ್ಕಳ ರಕ್ಷಣಾ ಘಟಕ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.