ವಿಜಯಪುರ: ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ ೩೬೦೧೦.೨೦ ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇದು ರೈತರ ಬರ ಪರಿಹಾರ ಹಣವಾಗಿರುವುದರಿಂದ ಯಾವುದೇ ಕಾರಣಕ್ಕೂ ರೈತರ ಸಾಲಗಳಿಗೆ ಈ ಹಣವನ್ನು ಕಡಿತಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ ಅವರು, ರಾಜ್ಯ ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದೆ. ಇದನ್ನು ರೈತರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿಜಯಪುರ ಸಹಕಾರ ಸಂಘಳ ಇಲಾಖೆಯ ಉಪ ನಿಬಂಧಕರಿಗೆ ಸೂಚಿಸಲಾಗಿದೆ. ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಬರ ಪರಿಹಾರದ ಹಣ ರೈತರು ಬೀಜ, ರಸಗೊಬ್ಬರ, ಹೊಲದ ಉಳುಮೆ, ಬಿತ್ತನೆಗೆ ಸಿದ್ಧಮಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾಗಿ ಬ್ಯಾಂಕ್‌ಗಳು ರೈತರಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
