ಚಿಮ್ಮಡ: ಇಂದಿನ ಸಾಧಕ ವಿದ್ಯಾರ್ಥಿಗಳ ಸತ್ಕಾರ, ಮುಂದಿನ ವಿದ್ಯಾರ್ಥಿಗಳಿಗೆ ಗುರಿ ತಲುಪಲು ಪ್ರೇರಣೆಯಾಗಲಿದೆ ಎಂದು ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ ಹೇಳಿದರು.
ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು ಪ್ರತಿಯೊಬ್ಬರ ಬದುಕು ರೂಪಿಸುವುದೇ ಶಿಕ್ಷಣವಾಗಿದ್ದು ತಮ್ಮ ಗುರಿ ಮುಟ್ಟುವವರೆಗೆ ವಿಶ್ರಮಿಸದೆ ಸತತ ಅದ್ಯಯನ ಕಠಿಣ ಪರೀಶ್ರಮದ ಮೂಲಕ ಮುಂದಿನ ಶಿಕ್ಷಣಕ್ಕೆ ಅಣಿಯಾಗುವುದರೊಂದಿಗೆ ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕಾಗಿದೆ ಎಂದರು.
ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯದ ಪಿಯುಸಿಯಲ್ಲಿ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ೮ ಜನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವದರೊಂದಿಗೆ ಸಿಹಿ ಪೊಟ್ಟಣ ನೀಡಿ ಗೌರವಿಸಲಾಯಿತು. ಪ್ರಮುಖರಾದ ಮಹಾದೇವ ಕೋಳಿ, ಸಲೀಮ ಮುಜಾವರ, ಕಾಡಪ್ಪ ನಿಂಬರಗಿ ಸೆಇದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

