ಸಿಂದಗಿ: ಪಾಲಕರು ತಮ್ಮ ಮಕ್ಕಳಿಗೆ ಕೇವಲ ಪಠ್ಯ ಬೋಧನೆಗೆ ಸಿಮೀತಗೊಳಿಸದೇ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ್ದು ಸಂತಸ ತಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ವೀಠ್ಠಲ ಕೋಳೂರ ಹೇಳಿದರು.
ಪಟ್ಟಣದ ಹೊರವಲಯದ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆಯಲ್ಲಿ ಹಮ್ಮಿಕೊಂಡ ಬೇಸಿಗೆ ಶಿಬಿರ ಮುಕ್ತಾಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ಅವರಿಗೆ ಸಹಕರಿಸಬೇಕು ಅಂದಾಗ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ಧಿಯಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಬಳಿಕ ಹಾಡು, ನೃತ್ಯ, ಸಂಗೀತ ಮತ್ತು ಯೋಗವನ್ನು ಪ್ರದರ್ಶಿಸಿದರು.
ಈ ವೇಳೆ ಶಿವಶರಣ ಮಾವೂರ, ಭೀಮಾಶಂಕರ ತಾರಾಪೂರ, ಪ್ರಶಾಂತ ಕಮತಗಿ ಸೇರಿದಂತೆ ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

