ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೋಮವಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕ್ಷಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ನಗರ ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ, ಮಾತನಾಡಿ, ರಾಜ್ಯದಲ್ಲಿ ನಮ್ಮ ಸರ್ಕಾರ ಚುನಾವಣೆ ಮುನ್ನ ಘೋಷಣೆ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತರುವ ಮೂಲಕ ನುಡಿದಂತೆ ನಡೆದಿದೆ. ಈ ಯೋಜನೆಗಳು ಜನರಿಗೆ ತಲುಪಿವೆ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅನೇಕ ಜನರಿಗೆ ಸದುಪಯೋಗವಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಮುಂಬರುವ ನಾಲ್ಕು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದರು.
ಸಂಭ್ರಮಾಚರಣೆಯಲ್ಲಿ ಮುಖಂಡರಾದ ಲೋಕನಾಥ ಅಗರವಾಲ, ಬಸಣ್ಣ ದೇಸಾಯಿ, ಎಂ.ಜಿ.ಆದಿಗೊಂಡ,ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ರವಿ ರಾಠೋಡ, ರವಿ ಚಿಕ್ಕೊಂಡ, ಬಸವರಾಜ ಕೋಟಿ, ಸಂಗಯ್ಯ ಕಾಳಹಸ್ತೇಶ್ವರಮಠ, ಜಟ್ಟಿಂಗರಾಯ ಮಾಲಗಾರ, ಈರಣ್ಣ ವಂದಾಲ, ತಮ್ಮಣ್ಣ ಕಾನಾಗಡ್ಡಿ, ಮುರಗೇಶ ನಾಯ್ಕೋಡಿ, ನಜೀರ ಗಣಿ, ಸಂಕನಗೌಡ ಪಾಟೀಲ, ಮತಾಬ ಬಮ್ಮನಳ್ಳಿ, ಕಮಲಸಾಬ ಕೊರಬು, ಅಜೀಜ ಬಾಗವಾನ, ಸಿದ್ರಾಮ ಪಾತ್ರೋಟ, ರಮೇಶ ಬೆಕಿನಾಳ, ಮಹಾಂತೇಶ ಸಾಸಾಬಾಳ, ಪುನೀತ ಲಮಾಣಿ ಇತರರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

