ವಿಜಯಪುರ: ಮಕ್ಕಳಲ್ಲಿ ಕಂಡು ಬರುವ ಚಂಚಲತೆ ಮತ್ತು ಅತೀ ಚಟುವಟಿಕೆಯ(ADHD) ಕಾಯಿಲೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಮೇ 27 ರಿಂದ ಜೂನ್ 1 ರ ವರೆಗೆ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಾಲೇಜಿನ ಕೌಮಾರಭೃತ್ಯ ವಿಭಾಗದ ವತಿಯಿಂದ ಈ ಶಿಬಿರ ಆಯೋಜಿಸಲಾಗಿದೆ.
ಮಕ್ಕಳು ಒಂದೇ ಜಾಗದಲ್ಲಿ ಕುಳಿತುಕೊಳ್ಳದಿರುವುದು, ಹೋಂ ವರ್ಕ್ ಅಥವಾ ಶಾಲೆಯ ಚಟುವಟೆಕೆಗಳು ಸೇರಿದಂತೆ ದಿನನಿತ್ಯದ ಕೆಲಸಗಳನ್ನು ಮಾಡಲು ಹಿಂಜರಿಯುವುದು, ದೈನಂದಿನ ಚಟುವಟಿಕೆಗಳಲ್ಲಿ ಬಲು ಬೇಗನೆ ಬೇಸರಗೊಳ್ಳುವುದು ಅಟೇನ್ಷನ್ ಡೆಫಿಸಿಟ್ ಹೈಪರ್‌ಆಕ್ಟಿವಿಟಿ ಡಿಸರ‍್ಡರ್(ADHD) ಕಾಯಿಲೆಯ ಪ್ರಮುಖ ಲಕ್ಷಣಗಳಾಗಿವೆ. ಇಂಥ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳಿಗೆ ಈ ಶಿಬಿರದಲ್ಲಿ ಉಚಿತ ತಪಾಸಣೆ ಮತ್ತು ಔಷಧಿ ವಿತರಣೆ ನಡೆಯಲಿದೆ. ಪಾಲಕರು ಇದರ ಸದುಪಯೋಗ ಪಡದುಕೊಳ್ಳಬೇಕು ಎಂದು ಡಾ. ಸಂಜಯ ಕಡ್ಲಿಮಟ್ಟಿ ಅವರು ತಿಳಿಸಿದ್ದಾರೆ.
ಆಸಕ್ತರು ಮೊ. ಸಂ. 8197378138ಗೆ ಸಂಪರ್ಕಿಸಲು ಕೋರಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
