Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಾರಿ ಚಾಲಕ ಸೇರಿ ಐವರು ಆರೋಪಿಗಳ ಬಂಧನ
(ರಾಜ್ಯ ) ಜಿಲ್ಲೆ

ಲಾರಿ ಚಾಲಕ ಸೇರಿ ಐವರು ಆರೋಪಿಗಳ ಬಂಧನ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರದಲ್ಲಿನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿ

ವಿಜಯಪುರ: ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಕೊಲ್ಹಾರದಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ದರೋಡೆ ಮಾಡಿದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಹಾಂತೇಶ ಶಿವಗೊಂಡ ತಳವಾರ, ಧರೇಶ ರೇವಣಸಿದ್ಧ ದಳವಾಯಿ, ಶಿವಪ್ಪ ಶರಣಪ್ಪ ಮಾಶ್ಯಾಳ, ಸುನೀಲ ರಾಮಪ್ಪ ವಡ್ಡರ, ಶಿವಾನಂದ ದಳವಾಯಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಲಿಗೆಯಾದ ೩೨,೨೯,೩೬೪ ಲಕ್ಷ ರೂ.ಗಳ ಪೈಕಿ ೩೧,೦೪,೩೫೬ ಲಕ್ಷ ರೂ.ಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ ಮಾಹಿತಿ ನೀಡಿ, ಕೊಲ್ಹಾರದಲ್ಲಿ ಲಾರಿ ಚಾಲಕನ ಮೇಲೆ ನಡೆದ ಹಲ್ಲೆ, ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ನಮ್ಮ ಇಲಾಖೆಯ ತಂಡ ಯಶಸ್ವಿಯಾಗಿದ್ದು, ಕೃತ್ಯದಲ್ಲಿ ಕ್ಯಾಂಟರ ಲಾರಿ ಚಾಲಕ ಮಹಾಂತೇಶ ಶಿವಗೊಂಡ ತಳವಾರ ಅವರ ಕೈವಾಡ ಇರುವುದು ಕಂಡು ಬಂದಿದ್ದು, ಆತನ ಮಾಹಿತಿ ಮೇರೆಗೆ ಇನ್ನೂಳಿದ ೪ ಜನ ಆರೋಪಿತರು ಬುಲೆರೋ ಪಿಕ್‌ಅಪ್ ಗೂಡ್ಸ್ ವಾಹನದಲ್ಲಿ ಬಂದು ಕೃತ್ಯ ಎಸಗಿ ಹಣ ದೋಚಿಕೊಂಡು ಹೋಗಿರುತ್ತಾರೆ ಎಂದು ದೂರಿದರು.
ಘಟನೆ ಹಿನ್ನೆಲೆ: ಕಳೆದ ಕೆಲವು ದಿನಗಳ ಹಿಂದಷ್ಟೇ ಕೊಲ್ಹಾರ ಪಟ್ಟಣದ ಹೊರ ವಲಯದಲ್ಲಿ ಕ್ಯಾಂಟರ್ ವಾಹನ ತಡೆದ ದುಷ್ಕರ್ಮಿಗಳು ಚಾಲಕ ಮತ್ತೋರ್ವನ ಮೇಲೆ ಖಾರದ ಪುಡಿ ಎರಚಿ ರಾಡ್ ನಿಂದ ಹಲ್ಲೆ ಮಾಡಿ ಕ್ಯಾಂಟರ್ ನಲ್ಲಿದ್ದ ರೂ. ೩೨ ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಪರಾರಿಯಾಗಿದ್ದರು, ಕಲಬುರಗಿ ಜಿಲ್ಲೆಯ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವರು ರೈತರಿಂದ ಹತ್ತಿ ಸಂಗ್ರಹಿಸಿದ್ದರು. ಅಲ್ಲದೇ, ಈ ಹತ್ತಿಯನ್ನು ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರೋ ಹತ್ತಿ ಕಾರ್ಖಾನೆಯಲ್ಲಿ ಮಾರಾಟಕ್ಕೆ ಕಳುಹಿಸಿದ್ದರು. ಈ ಹತ್ತಿ ಮಾರಾಟ ಮಾಡಿದ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಮತ್ತು ಕ್ಲೀನರ್ ಮಲ್ಲು ಕೊಡಚಿ ಹತ್ತಿ ಮಾರಾಟದಿಂದ ದೊರೆತ ರೂ. ೩೨ ಲಕ್ಷ ನಗದು ಹಣದೊಂದಿಗೆ ಜೇವರ್ಗಿಗೆ ವಾಪಸ್ಸಾಗುತ್ತಿದ್ದರು. ಶುಕ್ರವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ಕೆಲವು ದುಷ್ಕ್ರಮಿಗಳು ಬುಲೆರೋ ವಾಹನ ತಂದು ನಿಲ್ಲಿಸಿ ಕ್ಯಾಂಟರ್ ವಾಹನವನ್ನು ಅಡ್ಡಗಟ್ಟಿದ್ದಾರೆ. ಅಷ್ಟೇ ಅಲ್ಲ, ನಂತರ ಕ್ಯಾಂಟರ್ ಮೇಲೆ ಕಲ್ಲು ಎಸೆದು ಗಾಜನ್ನು ಜಖಂ ಮಾಡಿದ್ದಾರೆ. ನಂತರ ಮಹಾಂತೇಶ ಕುಂಬಾರ ಮತ್ತು ಮಲ್ಲು ಕೊಡಚಿ ಅವರ ಕಣ್ಣಿಗೆ ಖಾರದ ಪುಡಿ ಎರಚಿಸಿದ್ದಾರೆ. ಅಲ್ಲದೇ, ಕ್ಯಾಂಟರ್ ನಲ್ಲಿದ್ದ ಇವರಿಬ್ಬರ ಮೇಲೆ ರಾಡ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ನಡೆದಿತ್ತು.
ಈ ಪ್ರಕರಣವನ್ನು ಬೇಧಿಸಲು ಎಎಸ್‌ಪಿಗಳಾದ ರಾಮನಗೌಡ ಹಟ್ಟಿ, ಶಂಕರ ಮಾರಿಹಾಳ, ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವಿ, ಗಿರಿಮಲ್ಲ ತಳಕಟ್ಟಿ ಹಾಗೂ ಪೊಲೀಸ್ ಅಧಿಕಾರಿಗಳಾದ ಶರಣಗೌಡ ಗೌಡರ, ಪ್ರವೀಣಕುಮಾರ ಗರೇಬಾಳ, ಯತೀಶಕುಮಾರ ಕೆ.ಎನ್, ಶ್ರೀಮತಿ ಐ.ಆರ್. ಮಾದರ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಖೊಟ್ಟಿ ದಾಖಲೆ ಸೃಷ್ಟಿ : ಆರೋಪಿಗಳ ಬಂಧನ
ಖೊಟ್ಟಿ ದಾಖಲೆ ಸೃಷ್ಟಿಸಿ ಭೂಗರಣ ಇಡೀ ಜಿಲ್ಲೆಯಲ್ಲಿಯೇ ಸಂಚಲನ ಮೂಡಿಸಿದ್ದು, ಈ ರೀತಿಯ ಭೂಗರಣ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಬಾನಗರ ನಿವಾಸಿ ಸಾಹೇಬಗೌಡ ಮಲ್ಲನಗೌಡ ರುದ್ರಗೌಡರ ಅವರಿಗೆ ವಂಚಿಸಿದ ಪ್ರಕರಣ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ರಾಜು ಮಾಳಪ್ಪ ಮಾನೆ, ದಯಾನಂದ ಅಮಯ್ಯ ಸಂಗಮದ, ಕಿರಣ ವಾಸುದೇವ ಬೇಡೆಕರ, ದಶರಥ ಸಿದ್ಧರಾಮ ಹೊಸಮನಿ, ದತ್ತಾತ್ರೇಯ ಶರಣಪ್ಪ ಶಿವಶರಣ, ಸಾಕೀಫ್ ಬಷೀರ್‌ಅಹ್ಮದ್ ನಂದವಾಡಗಿ ಸೇರಿದಂತೆ ಇನ್ನೂ ಕೆಲವರು ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಸರ್ವೆಯಲ್ಲಿ ಬರುವ ರಿ.ಸ.ನಂಬರ ೪೮/*/೧ ಕ್ಷೆತ್ರ ೨೦ ಎಕರೆ ಜಮೀನು ಮಾಲೀಕನಾದ ಅರ್ಗನ್ ಉರ್ಫ್ ಅಗನು ಧೋಳು ಕಾಳೆ ಅವರ ಹೆಸರಿನಲ್ಲಿ ಖೊಟ್ಟಿ ಆಧಾರ್ ಹಾಗೂ ಪ್ಯಾನ್ ಕಾರ್ಡನ್ನು ಸೃಷ್ಟಿ ಮಾಡಿಕೊಂಡು ಅವುಗಳನ್ನು ಖರೀದಿ ಪತ್ರದಲ್ಲಿ ಖೊಟ್ಟಿ ರೀತಿಯಿಂದ ನಮೂದ ಮಾಡಿ ಖರೀದಿ ಪತ್ರ ತಯಾರು ಮಾಡಿಕೊಂಡು ದೂರುದಾರರ ಕಡೆಯಿಂದ ೪೬,೫೦,೦೦೦ ರೂ.ಗಳನ್ನು ಪಡೆದುಕೊಂಡು ವಂಚನೆ ಮಾಡಿ, ಮೋಸತನದಿಂದ ಜಮೀನು ಖರೀಧಿ ಹಾಕಿಕೊಟ್ಟಿದ್ದು ಈ ಬಗ್ಗೆ ವಿಜಯಪುರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ಪೊಲೀಸ್ ಅಧಿಕಾರಿಗಳಾದ ಸುನೀಲಕುಮಾರ ನಂದದೇಶ್ವರ ಅವರನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು. ಈ ತನಿಖಾ ತಂಡ ೪೬,೫೦,೦೦೦ ರೂ. ಗಳನ್ನು ಜಪ್ತ ಮಾಡಲಾಗಿದೆ. ಅಲ್ಲದೇ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ ಹಾಗೂ ಪಾನ್ ಕಾರ್ಡ ಸೃಷ್ಟಿ ಮಾಡಿದವರಿಗೆ ಪತ್ತೆ ಮಾಡಿ ವಿಚಾರಣೆ ಮಾಡುವ ತನಿಖೆ ಪ್ರಗತಿಯಲ್ಲಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.