ಅಧಿಕಾರಿಗಳಿಂದ ಅಸ್ಕಿ, ಬೆಕಿನಾಳ, ಬೂದಿಹಾಳ(ಪಿ.ಟಿ) ಕೆರೆಗಳಿಗೆ ನೀರು ತುಂಬಿಸುವ ಮನವರಿಕೆ
ಕಲಕೇರಿ: ಸಮೀಪದ ಆಸ್ಕಿ ಕೆರೆಯಲ್ಲಿ ನೂರಾರು ರೈತರು ಆಸ್ಕಿ, ಬೆಕಿನಾಳ, ಹಾಗೂ ಬೂದಿಹಾಳ ಪಿ.ಟಿ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ತಾಳಿಕೋಟಿ ತಹಶಲ್ದಾರರಾದ ಕೀರ್ತಿ ಚಾಲಕ ಮತ್ತು, ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳಾದ ಇಇ ಎಸ್.ಎನ್, ಬಂಡಿವಡರ್, ಸೆಕ್ಷನ ಆಫೀಸರ್ ಪ್ರವೀಣ ಗುಡಗುಂಟಿ ಅವರ ಮಧ್ಯವಸ್ತಿಕೆಯಲ್ಲಿ ಬುಧವಾರ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಜೂನ ೬ರ ನಂತರ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಡನೆ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು, ಜಿಲ್ಲಾಧಿಕಾರಿಗಳು, ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಸಭೆ ಮಾಡಿ ಅಧಿಕೃತವಾಗಿ ಯಾವ ರೀತಿ ಈ ೩ ಕೆರೆಗಳನ್ನು ತುಂಬಿಸಬೇಕು ಎಂದು ತಜ್ಞರಿಂದ ಸಮೀಕ್ಷೆ ಮಾಡಿಸಿ ನಂತರದಲ್ಲಿ ಒಂದು ನಿರ್ಣಯಕ್ಕೆ ಬರಬಹುದು ಎಂದು ಹೋರಾಟಕ್ಕೆ ಕುಳಿತ ರೈತರೊಡನೆ ಕೀರ್ತಿ ಚಾಲಕ ಅವರು ಮನವರಿಕೆ ಮಾಡಿದ ನಂತರ ಹೋರಾಟವನ್ನು ಹಿಂಪಡೆಯಲಾಯಿತು.
ಈ ವೇಳೆ ತಾಳಿಕೋಟಿ ತಾ ಅಧ್ಯಕ್ಷರಾದ ಶ್ರೀಶೈಲ ವಾಲಿಕಾರ ಮಾತನಾಡುತ್ತಾ ತಹಶಿಲ್ದಾರರ ಅವರ ಮಾತಿಗೆ ಗೌರವ ಕೊಡುತ್ತೆವೆ, ಕೂಡಲೇ ಅಧಿಕಾರಿಗಳೊಡನೆ ಚರ್ಚಿಸಿ ಒಂದು ದಿನಾಂಕವನ್ನು ನಿರ್ಣಯ ಮಾಡಿ ಆಗ ಆಸ್ಕಿ, ಬೆಕಿನಾಳ, ಬೂದಿಹಾಳ ಪಿ.ಟಿ ಗ್ರಾಮದ ಹಿರಿಯ ರೈತ ಮುಖಂಡರೊಡನೆ ಸಭೆಗೆ ಬಂದು ಶಾಶ್ವತವಾದ ತಿರ್ಮಾನಕ್ಕೆ ಬರೋಣ, ಪ್ರತಿವರ್ಷ ಬೇಸಿಗೆಯಲ್ಲಿ ಈ ಕೆರೆಗಳಿಗೆ ತಪ್ಪದೇ ನೀರು ತುಂಬಿಸುವಂತಾಗಬೇಕು ಎಂದರು
ಈ ವೇಳೆ ಆಸ್ಕಿ ಗ್ರಾಮದ ರೈತ ಸಂಘದ ಅಧ್ಯಕ್ಷ ಸಂಗನಗೌಡ ಬಿರಾದಾರ, ರೈತ ಸಂಘದ ತಾ. ಉಪಾಧ್ಯಕ್ಷ ಗೌಡಪ್ಪಗೌಡ ಹಳಿಮನಿ ಡಾ|| ಪ್ರಭುಗೌಡ ಬಿರಾದಾರ, ಉಪಾಧ್ಯಕ್ಷರಾದ ಶರಣಗೌಡ ಬಿರಾದಾರ, ತಾ. ಸಂಚಾಲಕರಾದ ಮಹಿಬೂಬ ಗೊಬ್ಬರಡಗಿ, ಗ್ರಾ.ಪಂ ಉಪಾಧ್ಯಕ್ಷ ಅಯ್ಯಪ್ಪ ಮುಗಳಿ, ರಾಮನಗೌಡ ಚೌದ್ರಿ, ಮಲ್ಲಪ್ಪ ಅಂಗಡಿ, ಮುತ್ತು ಹೂಗಾರ, ಗುರನಗೌಡ ಬಿರಾದಾರ, ಮಂಜು ಪಡಶೆಟ್ಟಿ, ಮಹದೇವಪ್ಪ ಮಾದರ, ವೆಂಕಣ್ಣ ಗುತ್ಯಾಳ, ಬಸವರಾಜ ಹಡಪದ, ಶಾಂತಗೌಡ ಬಿರಾದಾರ, ಪ್ರಭುಗೌಡ ಬಿರಾದಾರ, ಪ್ರಭುಗೌಡ ಹಳಿಮನಿ, ಶಂಕರ ಮಗದಾಳ, ದೇವಿಂದ್ರ ತುರಕನಗೇರಿ, ಬೆಕಿನಾಳ ಗ್ರಾಮದ ದೇವಿಂದ್ರಪ್ಪಗೌಡ ಪಾಟೀಲ, ಶ್ರೀಶೈಲ ಸಜ್ಜನ, ಮಲ್ಲಪ್ಪ ಮುದನೂರ, ಶ್ರೀಶೈಲ ಹಿರೇಮಠ, ರಾಮನಗೌಡ ಕರಕಳ್ಳಿ, ಲಕ್ಷö್ಮಣ ಚಲವಾದಿ, ಮರಲಿಂಗಪ್ಪ ನಾಟಿಕಾರ, ಮಡಿವಾಳಪ್ಪ ಸಜ್ಜನ, ಬೂದಿಹಾಳ ಗ್ರಾಮದ ಬಸನಗೌಡ ಪಾಟೀಲ, ಸಂತೋಷ ಕುಳಗೇರಿ, ಭೀಮನಗೌಡ ಬಿರಾದಾರ, ಶರಣಪ್ಪ ಹಯ್ಯಾಳ, ಜಟ್ಟೆಪ್ಪ ಮಾದರ ಸೇರಿದಂತೆ ಅನೇಕರು ಇದ್ದರು

