ವಿಜಯಪುರ: ವಿಜಯಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ.೨೭ ಹಾಗೂ ೨೮ ರಂದು ಬೆಳಗ್ಗೆ ೯ ಗಂಟೆಯಿಂದ ರಾಮನಗರದ ಟೊಯೊಟಾ ಕಿರ್ಲೋಸ್ಕರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕ್ಸ್, ಫಿಟ್ಟರ್, ಮೇಕ್ತನಿಸ್ಟ್, ಟರ್ನರ್, ಡೀಸೆಲ್ ಮೆಕ್ಯಾನಿಕ್, ಎಂ ಎಂ ವಿ, ಟಿ ಡಿ ಎಂ ವೃತ್ತಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಒಂದು ಪ್ರತಿ ತಮ್ಮ ಮಾಹಿತಿ ಹಾಗೂ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳ ದಾಖಲೆ ಹಾಗೂ ಭಾವಚಿತ್ರ ದೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಐ ಟಿ ಐ ಪ್ರಾಚಾರ್ಯರು, ದೂರವಾಣಿ ಸಂಖ್ಯೆ; ೦೮೩೫೨-೬೦೩೬೦ ಅಥವಾ ೯೮೮೬೪೩೭೫೧೭ ಕ್ಕೇ ಕರೆಮಾಡಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
