ಸಿಂದಗಿ: ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದರಿಂದ ನಮ್ಮ ಜೀವವನ್ನು ನಾವು ರಕ್ಷಣೆ ಮಾಡಿಕೊಳ್ಳಬಹುದು. ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ಸುರಕ್ಷಿತವಾಗಿ ವಾಹನ ಚಲಿಸುವುದು ನಾವೆಲ್ಲರೂ ರೂಢಿ ಮಾಡಿಕೊಳ್ಳಬೇಕು ಎಂದು ಸಿಂದಗಿ ಪೋಲಿಸ ಠಾಣೆಯ ಆರಕ್ಷಕ ಅಧಿಕಾರಿ ಭೀಮಪ್ಪ ರಬಕವಿ ಹೇಳಿದರು.
ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ.ಮನಗೂಳಿ ಪದವಿ ಕಾಲೇಜ, ಜೆ.ಎಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಸಿಂದಗಿ ಪೋಲಿಸ್ ಠಾಣೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ೨೦೨೩-೨೪ನೆಯ ಸಾಲಿನಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಪರಿಣಾಮ ಸುಮಾರು ೪೧೮ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ನಾವೇಲ್ಲರೂ ನಮ್ಮ ಕುಟುಂಬವನ್ನು ರಕ್ಷಣೆ ಮಾಡುವಂತವರು. ನಾವು ಜಾಗೃತರಾಗಿ ಕಡ್ಡಾಯವಾಗಿ ಹೆಲ್ಮೆಟ್‌ನ್ನು ಧರಿಸಿ ವಾಹನ ಚಲಾಯಿಸಬೇಕು ಎಂದರು.
ಈ ವೇಳೆ ಎಚ್.ಜಿ.ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜೆ.ಎಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಎಂ.ಹುರಕಡ್ಲಿ, ಉಪನ್ಯಾಸಕ ಎಸ್.ಆರ್.ಬಿರಾದಾರ, ಎಸ್.ಎ.ಜಾಗಿರದಾರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

