ಜನನ-ಮರಣ ಉಪನೋಂದಣಾಧಿಕಾರಿಗಳ ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೂಚನೆ
ವಿಜಯಪುರ: ಜನನ ಮರಣ ಗಳ ನೋಂದಣಿ ಅಧಿನಿಯಮ ೧೯೬೯ರಂತೆ ಜನನ ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದ್ದು, ಇಂತಹ ಘಟನೆಗಳು ಸಂಭವಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಿಜಯಪುರ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ವಿಜಯಪುರ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ಗುರುವಾರ ನಡೆದ ಜನನ-ಮರಣ ಉಪನೋಂದಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ಡಿ.ಇ.ಓ ರವರಿಗೆ ಜಿಲ್ಲಾ ಮಟ್ಟದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಸದುಪೋಗವನ್ನು ಪಡೆದುಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಜನನ ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಕಾರ್ಯಗತಗೊಳಿಸಲು ನೋಂದಣಿ ಕಾರ್ಯದಲ್ಲಿ ನಿರತರಾಗಿರುವ ನೋಂದಣಿ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ಅಧಿನಿಯಮ ಮತ್ತು ನಿಯಮಗಳ ಉಪಬಂಧಗಳ ಪೂರ್ಣವಾದ ಅರಿವು ಮೂಡಿಸುವುದು ಅವಶ್ಯಕವಾಗಿರುತ್ತದೆ ನೋಂದಣಿ ಪದ್ಧತಿ ಅಡಿ ಕಾರ್ಯ ನಿರ್ವಹಿಸುವ ಎಲ್ಲ ಸಿಬ್ಬಂದಿಗಳಿಗೆ ಅವರ ಪಾತ್ರ ಮತ್ತು ಜವಾಬ್ದಾರಿಗಳನ್ನು ತಿಳಿಸಲು ಹಾಗೂ ಅವರು ನೋಂದಣಿ ಕಾರ್ಯವನ್ನು ನಿರ್ವಹಿಸಲು ಸಹಾಯಕವಾಗುವಂತೆ ಮಾರ್ಗದರ್ಶನ ನೀಡುವ ಸಲುವಾಗಿ ಈ ತರಬೇತಿಯು ಅವಶ್ಯಕವಾಗಿದೆ ಆದ್ದರಿಂದ ಎಲ್ಲರೂ ಈ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಬಿ. ಎಸ್ ಮೂಗನೂರಮಠ ಮಾತನಾಡಿ, ಜನನ ಮರಣಗಳ ನೋಂದಣಿ ಕಾರ್ಯದ ಅಧಿನಿಯಮ ಮತ್ತು ನಿಯಮಗಳ ಉಪಬಂಧಗಳ ಪೂರ್ಣವಾದ ಅರಿವು ಮೂಡಿಸುವುದು ಈ ತರಬೇತಿಯ ಉದ್ದೇಶ ಎಂದು ತಿಳಿಸಿದರು.
ಈ ವೇಳೆ ವಿಜಯಪುರ ಜಿಲ್ಲೆಯ ಅಂಕಿ-ಅಂಶಗಳನೋಟ ೨೦೨೨-೨೩ರ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ ಅಲ್ಲಾಪೂರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಸಹಾಯಕ ನಿರ್ದೇಶಕ ಎ. ಬಿ ಮನಿಯಾರ, ಮುದ್ದೇಬಿಹಾಳ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಎಸ್ ಕಲ್ಮನಿ, ನಿಡಗುಂದಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ. ಎಸ್ ಹಿರೇಮಠ, ಕೊಲ್ಹಾರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೇರಿ, ಸಿಂದಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸುಬ್ರಮಣ್ಯ ಶರ್ಮಾ, ಆಲಮೇಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಫರಿದಾ ಬಾನು ಪಠಾಣ, ಬಸವನ ಬಾಗೆವಾಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಜಿಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜಿನ್ನೂರ, ಜಿಲ್ಲಾ ಪಂಚಾಯತಿಯ ಅಧಿಕಾರಿ ಹಾಗೂ ಸಿಬ್ಬಂದಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಸಿಬ್ಬಂದಿ, ಜಿಲ್ಲೆಯ ಎಲ್ಲ ತಾಲೂಕಿನ ತಾಲೂಕ ಯೋಜನಾಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಯವರು, ಡಿ.ಇ.ಓ ರವರು ಹಾಗೂ ಇತರರು ಉಪಸ್ಥಿತರಿದ್ದರು.

