Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಚನ ಆಲಿಸುವದರಿಂದ ಜೀವನ ಪಾವನ :ಸಂಗನಬಸವ ಶ್ರೀ
(ರಾಜ್ಯ ) ಜಿಲ್ಲೆ

ಪ್ರವಚನ ಆಲಿಸುವದರಿಂದ ಜೀವನ ಪಾವನ :ಸಂಗನಬಸವ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಜೀವನದಲ್ಲಿ ಪುರಾಣ-ಪ್ರವಚನ ಕೇಳುವದರಿಂದ ಮನಸ್ಸು ಹಸನಾಗುತ್ತದೆ ಎಂದು ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಮನಗೂಳಿ ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ಗುರುವಾರ ಶತಾಯುಷಿ ಲಿಂ.ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೪೧ ನೇ ಪುಣ್ಯಸ್ಮರಣೋತ್ಸವ ಹಾಗೂ ೨೦೦೮ ಜಗದ್ಗುರು ಲಿಂ.ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ಜಾತ್ರಾಮಹೋತ್ಸವದಂಗವಾಗಿ ೧೧ ದಿನಗಳ ಕಾಲ ಹಮ್ಮಿಕೊಂಡಿರುವ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಪುರಾಣ ಉದ್ಘಾಟನೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪುರಾಣ-ಪ್ರವಚನ ಕೇಳುವದರಿಂದ ಮನುಷ್ಯನಿಗೆ ಸಂಸ್ಕಾರ ತಿಳಿಯುತ್ತದೆ. ಸಂಸಾರದ ಜಂಜಾಟದಲ್ಲಿ ಪ್ರತಿನಿತ್ಯ ಚಿಂತೆ ಮಾಡುವದನ್ನು ಬಿಟ್ಟು ಪುರಾಣ-ಪ್ರವಚನಗಳು ನಡೆಯುವ ಸ್ಥಳಕ್ಕೆ ಹೋಗಿ ಅಲ್ಲಿನ ನಾಲ್ಕು ಹಿತ-ನುಡಿಗಳನ್ನು ಆಲಿಸುವದರಿಂದ ಜೀವನ ಹಸನಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ಮಾತನಾಡಿ, ಮನಗೂಳಿಯ ಸಂಸ್ಥಾನ ಹಿರೇಮಠವು ಜಿಲ್ಲೆಯಲ್ಲಿಯೇ ಅದರದೇ ಆದ ಸಾಮಾಜಿಕ ಕಾರ್ಯಗಳ ಮೂಲಕ ಗಮನ ಸೆಳೆಯುತ್ತಿದೆ. ಶ್ರೀಮಠದ ಲಿಂಗೈಕ್ಯ ಪೂಜ್ಯರ ಸಂಕಲ್ಪಗಳನ್ನು ಪ್ರಸ್ತುತ ಶ್ರೀಗಳು ಈಡೇರಿಸುತ್ತಿದ್ದಾರೆ. ಈ ಮೂಲಕ ಶ್ರೀಮಠದ ಕೀರ್ತಿಯನ್ನು ನಾಡಿನಲ್ಲಿ ಪಸರಿಸುತ್ತಿದ್ದಾರೆ. ಶ್ರೀಮಠದ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭವನ್ನು ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ಮಾಡಿದ್ದನ್ನು ಸ್ಮರಿಸಿಕೊಂಡರು.
ಕಾರ್ಯಕ್ರಮದಲ್ಲಿ ಹೊನ್ನಿಗನೂರಿನ ಪ್ರವಚನಕಾರ ವಿರುಪಾಕ್ಷಿ ಶಾಸ್ತ್ರೀಜಿ, ಈರಪ್ಪ ಹುಣಸಿಕಟ್ಟಿ, ರಾಮು ಬಿರಾದಾರ,ಯಂಕಪ್ಪ ಬನ್ನೂರ, ಗವಾಯಿ ಅಂಬರೀಶ, ತಬಲಾ ವಾದಕ ಮಲ್ಲೇಶಕುಮಾರ ಮದ್ಲಾಪುರ ಇದ್ದರು.
ಮಹಾಂತೇಶ ಮನಗೂಳಿ ಸ್ವಾಗತಿಸಿ, ನಿರೂಪಿಸಿದರು. ಶ್ರವಣ ಕೋಟ್ಯಾಳ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.