ವಿಜಯಪುರದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಿಂದ ಪತ್ರಿಕಾಗೋಷ್ಠಿ
ವಿಜಯಪುರ: ರಾಜ್ಯದ ಮುಂಬರುವ ದಿನಗಳಲ್ಲಿ ವಿಧಾನ ಪರಿಷತ್‌ನ 11 ಜನ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಕಾಂಗ್ರೇಸ್ ಪಕ್ಷದಿಂದ 7 ಜನ ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಈ ಪೈಕಿ ವಿಜಯಪುರ ಜಿಲ್ಲೆಯಿಂದ ಮುಸ್ಲಿಂ ಸಮುದಾಯದ ಒರ್ವ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಮುಸಿಂ ಸಮಾಜದ ಮುಖಂಡ ಎಂ.ಸಿ. ಮುಲ್ಲಾ ಕಾಂಗ್ರೇಸ್ ಪಕ್ಷದ ಮುಖಂಡರಿಗೆ ಒತ್ತಾಯಿಸಿದ್ದಾರೆ.
ವಿಜಯಪುರ ನಗರದ ಖಾಸಗಿ ಹೋಟೇಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಸ್ಥಾನಗಳಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ 6 ಜನ ಶಾಸಕರ ಆಯ್ಕೆಗೆ ಮುಸ್ಲಿಂ ಸಮುದಾಯದ ಮತಗಳೆ ಕಾರಣ, ಮುಸ್ಲಿಂ ಸಮುದಾಯದ ಬೆಂಬಲದಿಂದಾಗಿ ಕಾಂಗ್ರೇಸ್ ನಾಯಕರು ಗೆಲುವು ಸಾಧಿಸಿದ್ದಾರೆ. ಆದರೆ ಈ 6 ಜನರಲ್ಲಿ ಒರ್ವ ಶಾಸಕನು ಮುಸ್ಲಿಂ ಶಾಸಕ ಇಲ್ಲ ಎಂದರು.
ಈ ಹಿಂದೆ ಜ್ಯಾತ್ಯಾತೀತ ಎನಿಸಿಕೊಂಡ ಜೆಡಿಎಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯದ ಜನರು ಬೆಂಬಲಿಸಿದ್ದರು. ಆದರೆ ಜೆಡಿಎಸ್ ಪಕ್ಷ ಬಿಜೆಪಿ ಪಕ್ಷದ ಮಿತ್ರ ಪಕ್ಷವಾದ್ದರಿಂದ ಮುಸ್ಲಿಂ ಸಮುದಾಯದ ಜನರು ಸಂಪೂರ್ಣವಾಗಿ ಜ್ಯಾತ್ಯಾತೀತ ಪಕ್ಷ ಎನಿಸಿಕೊಂಡ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಜಿಲ್ಲೆಯ ಮುಸ್ಲಿಂ ಸಮುದಾಯದ ಜನರು 100ಕ್ಕೆ 100ರಷ್ಟು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಿದ್ದಾರೆ ಎಂದು ತಿಳಿಸಿದರು.
ಆದ್ದರಿಂದ ನಾವು ಕಾಂಗ್ರೇಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಕಾಂಗ್ರೇಸ್ ಪಕ್ಷದ ಎಲ್ಲ ಶಾಸಕರು, ಎಲ್ಲ ನಾಯಕರಿಗೆ ಕೇಳುವುದು ಒಂದೇ. ಈ ಬಾರಿ ವಿಧಾನ ಪರಿಷತ್ ಸ್ಥಾನಕ್ಕೆ 7 ಸ್ಥಾನಗಳಲ್ಲಿ ಮುಸಿಂ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕು. ವಿಶೇಷವಾಗಿ ವಿಜಯಪುರ ಜಿಲ್ಲೆಯಿಂದ ಯಾರಾದರೂ ಒಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು. ಈ ಮೂಲಕ ಮುಸ್ಲಿಂ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಅಕ್ರಂ ಮಾಶ್ಯಾಳಕರ್, ಜಮೀರ್‌ಅಹಮದ್ ಭಕ್ಷಿ, ಶಬ್ಬಿರ ಜಾಗಿರದಾರ, ದಸ್ತಗೀರ ಸಾಲೊಟಗಿ ಹಾಗೂ ಫಯಾಜ ಕಲಾದಗಿ ಉಪಸ್ಥಿತರಿದ್ದರು.

