ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನವು ಮೇ. ೨೬ ರಂದು ಬೆಳಗ್ಗೆ ೧೦ ಗಂಟೆಗೆ ಪ್ರತಿಭಾ ಪುರಸ್ಕಾರ ಹಾಗೂ ಸಾದ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತೋತ್ಸವ ಹಮ್ಮಿಕೊಂಡಿದೆ. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ವಹಿಸುವರು. ಶಿಕ್ಷಕ ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ದೇವರಹಿಪ್ಪರಗಿ ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಶ್ರೀಶೈಲಗೌಡ ಹೊಸಳ್ಳಿ, ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜಶೇಖರ ಪಾಟೀಲ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಆಗಮಿಸುವರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿಯಲ್ಲಿ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ಉರ್ದು ಮಾಧ್ಯಮಗಳಲ್ಲಿ ಅಖಂಡ ತಾಲೂಕಿಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು, ದ್ವಿತೀಯ ಪಿಯುಸಿಯ ಕಲಾ ವಿಭಾಗ, ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗದಲ್ಲಿ ಅಖಂಡ ತಾಲೂಕಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ರಾಜ್ಯದಲ್ಲಿ ಉತ್ತಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಚನ್ನಬಸವೇಶ್ವರ ಪ್ರತಿಷ್ಠಾನದ ಸಂಚಾಲಕಿ ಸಾವಿತ್ರಿ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
