ಸ್ಕೀಜೋಫ್ರೇನಿಯಾ ದಿನಾಚರಣೆಯಲ್ಲಿ ನ್ಯಾಯಾಧೀಶ ಲೋಕೇಶ್ ಧನಪಾಲ್ ಸಲಹೆ
ವಿಜಯಪುರ: ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರ ಚಿಕಿತ್ಸೆ ಬಗ್ಗೆ ಕುಟುಂಬದ ಸದಸ್ಯರು ಕಾಯಿಲೆಯ ಅರಿವಿನ ಕೊರತೆಯಿಂದ ಗಮನಹರಿಸುವುದಿಲ್ಲ. ಅದಕ್ಕಾಗಿ ಇಂಥ ಕಾಯಿಲೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಬೇಕು. ಇದರಿಂದ ಎಷ್ಟೋ ಕುಟುಂಬಗಳ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ೪ನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಮತ್ತು ಜೆ.ಎಮ್.ಎಫ್.ಸಿ ಹಾಗೂ ಪ್ರಭಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರದ ಸದಸ್ಯ ಕಾರ್ಯದರ್ಶಿಗಳಾದ ಲೋಕೇಶ ಧನಪಾಲ್ ಹವಲೆ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಸ್ಕೀಜೋಫ್ರೇನಿಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳ್ಳಿ ಮಾತನಾಡಿ, ಮಾನಸಿಕ ಖಿನ್ನತೆಯಿಂದ ಹೊರ ಬರುಲು ದೈನಂದಿನ ಕೆಲಸದೊಂದಿಗೆ ಯೋಗಭ್ಯಾಸ, ಇತರೆ ಚಟುವಟಿಕೆಗಳನ್ನು ಮಾಡಬೇಕು ಎಂದು ತಿಳಿಸಿದರು.
ಮನೋವೈದ್ಯರಾದ ಡಾ. ಮಂಜುನಾಥ ಮಸಳಿ ಮಾತನಾಡಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆ ಪ್ರಕಾರ ಶೇ ೧ರಿಂದ ೫ಜನರು ಸ್ಕೀಜೋಫ್ರೇನಿಯಾದಿಂದ ಬಳಲುತ್ತಿದ್ದಾರೆ. ಯಾವುದೇ ರೀತಿಯ ಮಾನಸಿಕ ರೋಗ ಅಂದರೆ ಒಬ್ಬಂಟಿಯಾಗಿರುವುದು, ನಿದ್ರಾಹೀನತೆ, ಸರಿಯಾಗಿ ಕೆಲಸ ಮಾಡಿದಿರವುದು, ಜಿಗುಪ್ಸೆ, ಹತಾಷೆ ಇತ್ಯಾದಿ ಲಕ್ಷಣಗಳು ಕಂಡುಬAದಲ್ಲಿ ತಮ್ಮ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಉಚಿತ ಚಿಕಿತ್ಸೆಯನ್ನು ಪಡೆಯಲು ಹಾಗೂ ಉಚಿತ ಟೆಲಿ-ಮನಸ್‌ದೂರವಾಣಿ ಸಂಖ್ಯೆ ೧೪೪೧೬ ಗೆ ಕರೆಮಾಡಲು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಸಂಪತ್. ಎಂ. ಗುಣಾರಿ, ಡಾ. ರಾಜೇಶ್ವರಿ ಗೋಲಗೆರಿ ಡಾ. ಕೆ.ಡಿ. ಗುಂಡಬಾವಡಿ, ಡಾ. ಜೈಬುನ್ನಿಸಾ ಬೀಳಗಿ, ಡಾ. ಕವಿತಾ ದೊಡ್ಡಮನಿ, ಡಾ. ಅಪ್ಪಾಸಾಹೇಬ ಇನಾಮದಾರ. ಡಾ. ನಾಗರಾಜ ಎಚ್. ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ಪರಶುರಾಮ ಹಿಟ್ಟನಳ್ಳಿ, ಡಾ. ಸತೀಶ ತಿವಾರಿ, ಡಾ. ಅರ್ಚನಾ ಕುಲಕರ್ಣಿ, ಡಾ. ಮಾಗಿ. ಶ್ರೀ.ಜಿ.ಎಂ.ಕೊಲ್ಲೂರ, ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮಾನಸಿಕ ಕಾರ್ಯಕ್ರಮ ಸಿಬ್ಬಂದಿಗಳು, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಸಿಬ್ಬಂದಿಗಳು, ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಉಪ ಆರೋಗ್ಯಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹೊಸಮನಿ ಕಾರ್ಯಕ್ರಮ ನಿರ್ವಹಿಸಿದರು.

