ಬಸವನಬಾಗೇವಾಡಿ: ಚುಟುಕು ಸಾಹಿತ್ಯ ಪ್ರಕಾರಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟಕ ಚುಟುಕು ಸಾಹಿತ್ಯ ಕೇಂದ್ರ ಸಮಿತಿ ಹುಬ್ಬಳ್ಳಿ ಸ್ಥಳೀಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಖೇಡದ ಅವರಿಗೆ ಚುಟುಕು ದಾಸೋಹಿ ಪ್ರಶಸ್ತಿಯನ್ನು ಶಿರಸಿಯ ನೆಮ್ಮದಿ ಆವರಣದ ರಂಗಧಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 12ನೆಯ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಗವಿಮಠ ಬಸವಕಲ್ಯಾಣ, ಕಚುಸಾಪ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷ ಮನೋಹರ ಮೇಲ್ಮನೆ, ಶಿರಸಿ ಜಿಲ್ಲಾ ಸಾಹಿತ್ಯ ಸಂಚಲನಾಧ್ಯಕ್ಷ ಕೃಷ್ಣ ದತ್ತಾತ್ರೇಯ ಪದಕಿ, ಜಿಲ್ಲಾಧ್ಯಕ್ಷ ಜಿ. ಯು. ನಾಯ್ಕ, ಹುಬ್ಬಳ್ಳಿಯ ಕಚುಸಾಪ ಪ್ರಸಾರಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡ ಶೆಟ್ರು,ತಾಲೂಕು ಅಧ್ಯಕ್ಷ ಮಂಜುನಾಥ್ ಹೆಗಡೆ ಮತ್ತು ಗಣ್ಯಮಾನ್ಯರಿದ್ದರು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

