ವಿಜಯಪುರ: ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೪-೨೫ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಡಿಪಲೋಮಾ ಇನ್ ಟೂಲ್& ಡೈ ಮೆಕ್ಯಾನಿಕ್ ಇಂಜಿನಿಯರಿಂಗ್, ಡಿಪ್ಲೋಮಾ ಮೆಕಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೋಮಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ. ಆಸಕ್ತ ಅರ್ಹವಿದ್ಯಾರ್ಥಿಗಳು ಪ್ರವೇಶಾತಿಯ ಅರ್ಜಿಗಾಗಿ ಕೆಇಎ ವೆಬ್‌ಸೈಟ್ ನಲ್ಲಿರುವ ಅರ್ಜಿಯನ್ನು ಭರ್ತಿ ಮಾಡಿ ಜೂನ್ ೩ ರೊಳಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೂಡಲಸಂಗಮಕ್ಕೆ ಭೇಟಿ ನೀಡಿ ಅರ್ಜಿಯನ್ನು ಭರ್ತಿಮಾಡಿ ಸಂಬಂಧಿಸಿದ ಪ್ರಮಾಣಪತ್ರಗಳೊಂದಿಗೆ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಕಾರ್ಯಲಯ, ಮತ್ತು ದೂರವಾಣಿ ಸಂಖ್ಯೆ: ೯೯೦೨೫೫೬೧೧೦, ೭೪೧೧೮೧೧೯೧೬ಕ್ಕೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಶುಪಾಲರಾದ ಸುರೇಶ ರಾಥೋಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸರಕಾರಿ ಉಪಕರಣಗಾರ ತರಬೇತಿ ಕೇಂದ್ರ: ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
Related Posts
Add A Comment
