ಚಿಮ್ಮಡ: ವಿಶ್ವ ಆರೋಗ್ಯ ಸಂಸ್ಥೆಯವರ ಮಾರ್ಗದರ್ಶನದಲ್ಲಿ ಕಾಲಕಾಲಕ್ಕೆ ಆಚರಿಸಲಾಗುವ ಮಲೇರಿಯಾ, ಡೆಂಗ್ಯೂ, ದಿನಾಚರಣೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ ಎಂದು ತಾಲೂಕಾ ವ್ಹಿಬಿಡಿ ಮೇಲ್ವಿಚಾರಕ ನರಸಿಂಹ ಗಲಗಲಿ ಹೇಳಿದರು.
ಸ್ಥಳಿಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿರುತ್ತದೆ ಅದರಿಂದ ಡೆಂಗ್ಯೂ, ಮಲೇರಿಯ, ಚಿಕುನ್‌ಗುನ್ಯಾ, ಮೆದುಳು ಜ್ವರ, ಆನೆಕಾಲಿನರೋಗ ಸೇರಿದಂತೆ ಹಲವು ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ ಅದಕ್ಕೆ ಗಲೀಜು ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮನೆ, ಅಂಗಳಗಳನ್ನು ಸ್ವಚ್ಚತೆಯಿಂದ ಇಟ್ಟುಕೊಳ್ಳಬೇಕು ಎಂದರು.
ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ; ಕೆ.ಎಸ್. ತಳ್ಳಿ ಮಾತನಾಡಿ ಖಾಯಿಲೆ ಬಂದಮೇಲೆ ಚಿಕಿತ್ಸೆಗೆ ಪರದಾಡುವುದಕ್ಕಿಂತ ಖಾಯಿಲೆ ಬಾರದಂತೆ ಮುನ್ಯಚ್ಚರಿಕೆ ವಹಿಸುವುದೇ ಜಾಣ ನಡೆಯಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎಂ.ಬಿ.ಸಣ್ಣಕ್ಕಿ, ಸಾಂಕ್ರಾಮಿಕ ರೋಗಗಳ ತಜ್ಞ ಡಾ.ಭಾಗ್ಯವಂತ ಪಿಎಚ್‌ಸಿ ಮೇಲ್ವಿಚಾರಕ ಜಿ.ಎಸ್. ಮುಸಳಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಮಾಲಾ ಅಶೋಕ ಮೋಟಗಿ ವಹಿಸಿದ್ದರು. ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ ಪ್ರಭು ಗೋವಿಂದಗೋಳ, ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪುಜಾರಿ, ಆನಂದ ಕವಟಿ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಮನೋಜ ಹಟ್ಟಿ, ಬಾಳೇಶ ಬ್ಯಾಕೋಡ, ಅಶೋಕ ಧಡೂತಿ, ರಮೇಶ ಮೇತ್ರಿ, ನಾಗಪ್ಪಾ ಆಲಕನೂರ, ಶ್ರೀಮತಿ ಮೇಘಾ ಗಾಣಿಗೇರ, ಶ್ರೀಮತಿ ಬಂಗಾರೆವ್ವ ಜಾಲಿಕಟ್ಟಿ ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ ಸಿಆರ್‌ಪಿ ಸಮನ್ವಯ ಅಧಿಕಾರಿ ದ್ರಾಕ್ಷಾಯಿಣಿ ಮಂಡಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

