ಮುದ್ದೇಬಿಹಾಳ: ಪಟ್ಟಣದ ಹೊರಪೇಟ ಗಲ್ಲಿಯಲ್ಲಿರುವ ಸಿದ್ಧಗಾಂಗಾ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಮೆ೩೧ ರಂದು ಬೆಳಿಗ್ಗೆ ೧೦ ಗಂಟೆಗೆ ವಿಶ್ವ ತಂಬಾಕು ನಿಷೇಧ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿದ್ಧಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು, ಕಿರಿಯಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಗರಾಜ ಪೂಜಾರ ಮತ್ತು ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಸವರಾಜ ನಾಗರಾಳ, ಪ್ರಭಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ, ವಿ.ವಿ ಸಂಘದ ಅಧ್ಯಕ್ಷ ವಿ.ಎಸ್.ಮೇಟಿ, ಪ್ರಾಂಶುಪಾಲೆ ರಾಜಶ್ರೀ ಮೇಟಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಸಿಡಿಪಿಓ ಶಿವಮೂರ್ತಿ ಕುಂಬಾರ ಆಗಮಿಸಲಿದ್ದು , ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯ ತೇರದಾಳ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
