Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾನು ಗೆಲುವು ಸಾಧಿಸುವುದು ಶತಸಿದ್ಧ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ನಾನು ಗೆಲುವು ಸಾಧಿಸುವುದು ಶತಸಿದ್ಧ :ಸಂಸದ ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಅವಲೋಕನ ಸಭೆ

ವಿಜಯಪುರ:`ನನಗೆ ಸೋಲು ಗೆಲುವು ಮುಖ್ಯವಲ್ಲ, ನನ್ನ ಕಾರ್ಯಕರ್ತ ಬಂಧುಗಳ ಸ್ಪೂರ್ತಿ ಸದಾ ನನ್ನ ಜೊತೆಗಿರುವುದೇ ನನ್ನ ಆಸ್ತಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ವಿಜಯಪುರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಅವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಲಿತನಾದ ನಾನು ಈ ಮಟ್ಟಕ್ಕೆ ಬೆಳೆಯಲು ಕಾರ್ಯಕರ್ತ ಬಂಧುಗಳ ಅನುಗ್ರಹವೇ ಕಾರಣ, ರಾಜಕಾರಣದಲ್ಲಿ ಜಾತಿ ಎಂಬುದು ಮುಖ್ಯವಲ್ಲ, ಕೇವಲ ಒಂದೇ ಸಮಾಜದ ಬೆಂಬಲದಿಂದ ರಾಜಕಾರಣದಲ್ಲಿ ಬೆಳೆಯಲು ಸಾಧ್ಯವಿಲ್ಲ, ಉತ್ತಮ ನಾಯಕನಾಗಿ ಬೆಳೆದು ಬರಲು ಎಲ್ಲ ಸಮಾಜಗಳ ಆಶೀರ್ವಾದ, ಬೆಂಬಲವೇ ಕಾರಣ ಎಂದರು.
ನನ್ನ ಅನುಭವ ಚುನಾವಣೆಗಳಲ್ಲಿ ಪ್ರಸಕ್ತ ಚುನಾವಣೆ ಅತ್ಯಂತ ಮಹತ್ವದ್ದು, ಸಣ್ಣ ಪುಟ್ಟ ಗೊಂದಲಗಳು ಸಹ ಇಲ್ಲದೇ ಅತ್ಯಂತ ಸುಸೂತ್ರವಾಗಿ ನಡೆದ ಚುನಾವಣಾ ಇದಾಗಿದೆ, ಕಾರ್ಯಕರ್ತರ, ಮುಖಂಡರ ಶ್ರಮಕ್ಕೆ ನಾನು ಬೆಲೆ ಕಟ್ಟಲು ಸಾಧ್ಯವಿಲ್ಲ, ಈ ಋಣವನ್ನು ನಾನು ಜೀವನದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಜಿಗಜಿಣಗಿ ಹೇಳಿದರು. ಈ ಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮದಿಂದ ನಾನು ಗೆಲುವು ಸಾಧಿಸುವುದು ಶತಸಿದ್ಧ, ನನ್ನ ಕಾರ್ಯಕರ್ತ ಬಂಧುಗಳು ಆ ರೀತಿ ನನ್ನ ಪರವಾಗಿ ಕೆಲಸ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿರುವ ಕೆಟ್ಟ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆ ಆಲಿಸುತ್ತಿಲ್ಲ, ನಿಮ್ಮ ಸಮಸ್ಯೆ ಏನು ಎಂಬ ಸೌಜನ್ಯದಿಂದ ಕೇಳುತ್ತಿಲ್ಲ, ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿಯೂ ಬರಗಾಲ ಪರಿಸ್ಥಿತಿ ಇತ್ತು, ಆದರೆ ಬಿ.ಎಸ್. ಯಡಿಯೂರಪ್ಪ ಅವರು ರೈತರಿಗೆ ಅಭಯ ನೀಡಿ ವೈಜ್ಞಾನಿಕವಾಗಿ ಪರಿಹಾರ ಹಣ ನೀಡಿದರು, ಆದರೆ ಈ ಬದ್ಧತೆ ಈ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಸಮರ್ಪಣಾ ಮನೋಭಾವದ ಶ್ರಮ ಹಾಗೂ ಅವಿರತ ಓಡಾಟದ ಫಲವಾಗಿ ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ೧ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಶತಸಿದ್ಧ ಎಂದರು. ಕಾರ್ಯಕರ್ತ ಬಂಧುಗಳು ಚುನಾವಣೆ ಸಂದರ್ಭದಲ್ಲಿ ಅತ್ಯಂತ ಉತ್ಸಾಹದಿಂದ ಮೋದಿ ಸರ್ಕಾರದ ಸಾಧನೆ ಹಾಗೂ ಸಂಸದ ಜಿಗಜಿಣಗಿ ಅವರ ಸಾಧನೆಗಳನ್ನು ಮನೆ-ಮನೆಗೆ ತಿಳಿಸುವ ಮೂಲಕ ಅತ್ಯಂತ ಮಹತ್ವದ ಕಾರ್ಯ ನಿಭಾಯಿಸಿದರು ಎಂದರು. ಈಗ ಜಿಲ್ಲಾ ಪಂಚಾಯತ ಸೇರಿದಂತೆ ಅನೇಕ ಚುನಾವಣೆಗಳು ಎದುರಾಗಬಹುದು, ಆದರೆ ಯಾವ ಸಮಯದಲ್ಲಿಯೂ ಚುನಾವಣೆ ಬಂದರೂ ಸಮರ್ಪಣಾ ಮನೋಭಾವದಿಂದ ದುಡಿಯುವ ಕಾರ್ಯಕರ್ತರ ದೊಡ್ಡ ಪಡೆಯೇ ಬಿಜೆಪಿಯ ದೊಡ್ಡ ಆಸ್ತಿ ಎಂದರು. ಪ್ರಸ್ತುತ ರಾಜ್ಯ ಸರ್ಕಾರ ಒಂದು ರೀತಿ ಅನಿಷ್ಠ ಸರ್ಕಾರ, ಮಾರಕ ಸರ್ಕಾರವಾಗಿದೆ, ಬರ ಪರಿಸ್ಥಿತಿಯಲ್ಲಿ ರೈತರಿಗೆ ಅಭಯ ನೀಡಬೇಕಾದ ಸರ್ಕಾರ ಬೀಜ-ರಸಗೊಬ್ಬರ ದರವನ್ನು ಏರಿಕೆ ಮಾಡಿ ಬರದ ಬರೆಯ ಗಾಯದ ಮೇಲೆ ಮತ್ತೊಂದು ಬರೆ ಎಳೆಯುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ, ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.
ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ, ಕಾಸುಗೌಡ ಬಿರಾದಾರ, ನಗರ ಮಂಡಲ ಅಧ್ಯಕ್ಷ ಶಂಕರ್ ಹೂಗಾರ, ಜಿಲ್ಲೆ ಪ್ರಧಾನ ಕಾರ್ಯದರ್ಶಿಗಳಾದ ಸಾಬು ಮಾಶಾಳ, ಮಲ್ಲನಗೌಡ ಪಾಟೀಲ, ಈರಣ್ಣ ರಾವೂರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಪ್ನಾ ಕಣ್ಮುಚ್ಚಿನಾಳ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲೆಯ ಪದಾಧಿಕಾರಿಗಳು, ಮಹಿಳಾ ಮೋರ್ಚ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.