Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ಬದುಕು ಅಭಿವೃದ್ಧಿ :ರಿಷಿ ಆನಂದ
(ರಾಜ್ಯ ) ಜಿಲ್ಲೆ

ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ಬದುಕು ಅಭಿವೃದ್ಧಿ :ರಿಷಿ ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨೦೨೪-೨೫ ನೇ ಸಾಲಿನ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ವಿಜಯಪುರ: ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ನಮ್ಮ ಬದುಕು ಅಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.
ಜಿಲ್ಲಾ ಪಂಚಾಯತ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ನಗರ ವಲಯ ವಿಜಯಪುರ ಹಾಗೂ ಕೆ. ಪಿ. ಎಸ್. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಗಾಂಧಿ ವೃತ್ತ ವಿಜಯಪುರ ಇವರ ಸಹಯೋಗದಲ್ಲಿ ಗಾಂಧಿ ಚೌಕ್‌ನ ಕೆ. ಪಿ. ಎಸ್. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ)ನಲ್ಲಿ ಶುಕ್ರವಾರ ನಡೆದ ೨೦೨೪-೨೫ ನೇ ಸಾಲಿನ ದಾಖಲಾತಿ ಆಂಧೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿಯೂ ಆಸಕ್ತಿ ವಹಿಸಿ ಅಭ್ಯಾಸ ಮಾಡಬೇಕು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಪುಸ್ತಕಗಳು, ಸಮವಸ್ತ್ರಗಳನ್ನು ವಿತರಿಸಲಾಗುತ್ತದೆ. ಅದನ್ನು ಉಪಯೋಗಿಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳ ಜೀವನದಲ್ಲಿ ಮಾನಸಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಬಹಳ ಮುಖ್ಯವಾಗಿರುತ್ತದೆ. ಅದಕ್ಕೆ ಪೂರಕವಾದ ವಾತಾವರಣವನ್ನು ಶಾಲೆಗಳಲ್ಲಿ ಒದಗಿಸಲಾಗುತ್ತದೆ. ಜೊತೆಗೆ ಓದಿನೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಹ ತೊಡಗಿಸಿಕೊಳ್ಳಬೇಕು ಎಂದರು.
ಪ್ರಸ್ತುತ ಸಾಲಿನಲ್ಲಿ ನಮ್ಮ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಬಹಳ ಉತ್ತಮವಾಗಿತ್ತು. ಅದೇರೀತಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇನ್ನೂ ಹೆಚ್ಚಿನ ಫಲಿತಾಂಶಕ್ಕಾಗಿ ಶ್ರಮಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಲ್ಲದೆ ಮಕ್ಕಳಿಗೆ ದೈಹಿಕವಾಗಿ ಸದೃಢವಾಗಿರಲು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗಿಯಾಗಲು ಕರೆ ನೀಡಿದರು. ಉತ್ತಮ ಸಾಧನೆಗೆ ಶಿಕ್ಷಣ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವದಾಗಿ ಭರವಸೆಯ ಮಾತುಗಳನ್ನಾಡುತ್ತಾ ಮಕ್ಕಳಿಗೆ ಸ್ಪರ್ಧಾತ್ಮಾಕ ಜಗತ್ತಿನ ಪ್ರೋತ್ಸಾಹ ನೀಡಿದರು.
ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಸೊನ್ನದ ಅವರು ಕಳೆದ ಸಾಲಿನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಾಧನೆಯನ್ನು ನೆನಪಿಸುತ್ತ ೨೦೨೪-೨೫ ನೇ ಸಾಲಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಸೂಚ್ಯವಾಗಿ ವಿವರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯರವರು ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಲ್ಲ ಶಿಕ್ಷಕರು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಬರುವಂತೆ ಶ್ರಮಿಸಲು ಕರೆ ನೀಡಿದರು.
ಉಪ ಪ್ರಾಂಶುಪಾಲ ಸಿ. ಎಸ್. ಕಾಂಬಳೆ ಸ್ವಾಗತಿಸಿದರು. ಎಮ್. ಎಫ್ ಅರಳಿಮಟ್ಟಿ ಇವರು ನಿರೂಪಿಸಿದರು ಹಾಗೂ ಹೆಚ್. ಡಿ ಮಸೂತಿರವರು ವಂದಿಸಿದರು.
ಈ ಸಂದರ್ಭದಲ್ಲಿ ಡೈಟ್‌ನ ಹಿರಿಯ ಉಪನ್ಯಾಸಕರು ಎಸ್ ಎ ಮುಜಾವರ, ಕೆ. ಪಿ. ಎಸ್. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಶಿಕ್ಷಕ ವೃಂದದವರಾದ ಎಸ್. ಜಿ. ಹಂಚಿನಾಳ, ಎನ್. ಎಂ. ಹುಂಡೇಕಾರ, ಆರ್. ಆರ್. ಬಿರಾದಾರ, ವ್ಹಿ. ಬಿ. ಇಂಡಿ, ಎಸ್. ಎಸ್. ಬಿರಾದಾರ, ಆರ್. ಎಸ್. ಹಕೀಮ್, ಎ. ಜೆ. ದಖನಿ, ಎಂ. ಎಫ್. ಅಂಗಡಿ, ಶೋಭಾದೇವಿ ರಾಜಾಪೂರ, ಶೈಲಾ ಶೀಲವಂತ, ಬಿ. ಎ. ಬಿರಾದಾರ, ಬಿ. ಬಿ. ಕೋರೆ, ಎನ್. ಎಂ. ಪಟೇಲ ಹಾಗೂ ಇತರರು ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.