ಚಡಚಣ: ಶಿಕ್ಷಣವೆಂದರೆ ಕೇವಲ ಅಕ್ಷರ ಜ್ಞಾನದ ಗಳಿಕೆ, ಪಠ್ಯದ ಓದು ಮಾತ್ರವಲ್ಲ, ಅದು ಮಕ್ಕಳ ಸರ್ವತೋಮುಖ ಬೆಳವಣಿಗೆಯ ಮಹತ್ವದ ಕಾಲಘಟ್ಟ. ಶಾಲೆಗಳ ಅಭಿವೃದ್ಧಿ ಹೊಂದಿದರೆ, ಭಾರತದ ಭವಿಷ್ಯ ಇನ್ನಷ್ಟು ಭದ್ರವಾಗುತ್ತದೆ ಎಂದು ರೇವತಗಾಂವ ಗ್ರಾಮದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಆರ್.ಎನ್.ಹತ್ತಳ್ಳಿಯವರು ಹೇಳಿದರು.
ರಾಜ್ಯಾದ್ಯಂತ ಶುಕ್ರವಾರದಿಂದ ಶಾಲಾ ಪ್ರಾರಂಭೋತ್ಸವಕ್ಕೆ ಸರ್ಕಾರ ವಿದ್ಯುಕ್ತವಾಗಿ ಚಾಲನೆ ದೊರೆತ್ತಿದ್ದು, ಇತ್ತ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವುಗಳನ್ನು ನೀಡಿವ ಮೂಲಕ ಸ್ವಾಗತ ಕೋರಿ ಮಾತನಾಡಿದ ಅವರು. ೨೦೨೪-೨೫ನೇ ಶೈಕ್ಷಣಿಕ ವರ್ಷವನ್ನು ‘ಶೈಕ್ಷಣಿಕ ಬಲವರ್ಧನೆ ವರ್ಷ’ ಎಂದು ಸಂಕಲ್ಪ ಮಾಡಲಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಬದಲಾಗುತ್ತಿರುವ ಶೈಕ್ಷಣಿಕ ಅವಶ್ಯಕತೆಗಳು ಮತ್ತು ತಂತ್ರಜ್ಞಾನ ಆಧಾರಿತ ಕಲಿಕೆ ಹೊಂದಾಣಿಕೆ ಮಾಡಿಕೊಂಡು ಮಗುವಿನ ಕಲಿಕಾ ಬಲವರ್ಧನೆ ಆಗಬೇಕಾಗುತ್ತದೆ. ಅಲ್ಲದೇ ಮಕ್ಕಳನ್ನು ಇಂಗ್ಲಿಷ್ ಭಾಷೆಯ ಪರಿಣತರನ್ನಾಗಿಸುವ ನಿಟ್ಟಿನಲ್ಲಿ ‘ಸ್ಪೋಕನ್ ಇಂಗ್ಲಿಷ್’ ತರಗತಿಗಳನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಪಾಲಕ ಪ್ರತಿನಿಧಿ ಅಶೋಕ ಬಿಜ್ಜರಗಿಯವರು ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಪ್ರತಿಭಾವಂತ ಶಿಕ್ಷಕರಿದ್ದಾರೆ. ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹವಿದೆ. ಮಕ್ಕಳಲ್ಲಿ ನೈತಿಕ ಶಿಕ್ಷಣ ಬೆಳೆಸಲು ವಿಶೇಷ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಕಲಿಕೆಯೊಂದಿಗೆ ಪೋಷಕರಿಗೆ ಗೌರವ ಸಲ್ಲಿಸಬೇಕು. ಮಕ್ಕಳ ಆಟ-ಪಾಠದೊಂದಿಗೆ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಶಾಲೆಯ ಮುಖ್ಯದ್ವಾರಗಳಲ್ಲಿ ತಳಿರು ತೋರಣಗಳಿಂದ ಶೃಂಗರಿಸಿ, ಶಾಲಾ ಆವರಣದಲ್ಲಿ ರಂಗೋಲಿ ಬಿಡಿಸಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಾಲಾ ಪ್ರಾರಂಭೋತ್ಸವವನ್ನು ಶಿಕ್ಷಕರು ಹಾಗೂ ಪಾಲಕರುಗಳು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡುವ ಮೂಲಕ ಸಡಗರದಿಂದ ಹೊಸ ಕಲಿಕಾ ವರ್ಷವನ್ನು ಬರಮಾಡಿಕೊಂಡರು. ಅಲ್ಲದೇ ಶಾಲೆಗೆ ಆಗಮಿಸಿದ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಬಿಸಿಯೂಟದಲ್ಲಿ ವಿದ್ಯಾರ್ಥಿಗಳಿಗೆ ಜೀಲೇಬಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರುಗಳಾದ ಎಸ್.ಜೆ.ಬಿಜ್ಜರಗಿ, ಎಸ್.ಡಿ.ಆದಿಗೊಂಡೆ, ಪಿ.ಎ.ವಾಲಿಕಾರ, ಎಂ.ಕೆ.ಬಗಲಿ, ಎ.ಎಚ್.ಬಗಲಿ, ಬಿ.ಎಚ್.ಪೂಜಾರಿ, ಎನ್.ಎಸ್.ಘೊಡೇಸವಾರ, ಎಂ.ಎಸ್.ಶೇಖ, ಹೀನಾ ಸೈಯದರವರುಗಳು ಸೇರಿದಂತೆ ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

