Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂಬಾಕು ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ :ನ್ಯಾ. ಅಂಬಿ
(ರಾಜ್ಯ ) ಜಿಲ್ಲೆ

ತಂಬಾಕು ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ :ನ್ಯಾ. ಅಂಬಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ವಿಜಯಪುರ: ತಂಬಾಕು ಉತ್ಪನ್ನಗಳ ಸೇವನೆಯಿಂದ ದುಷ್ಪರಿಣಾಮಗಳು ಬೀರುತ್ತಿದ್ದು, ಇದಕ್ಕೆ ಕಡಿವಾಣ ಅತ್ಯವಶ್ಯಕವಾಗಿದ್ದು, ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡುವುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಹತ್ತಿರವಿರುವ ಗಾಂಧಿಭವನದ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿದರು.
ಸಮಾಜದ ಮಕ್ಕಳು, ಯುವಜನಾಂಗ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿವೆ. ಈ ವಿಷಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಕಡಿವಾಣ ಅತ್ಯವಶ್ಯಕವಾಗಿದೆ. ತಂಬಾಕು ಉತ್ಪನ್ನಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ನೈತಿಕತೆಯಿಂದ ಜವಾಬ್ದಾರಿಯನ್ನು ಅರಿತುಕೊಂಡು ಅರಿವು ಹೊಂದುವುದಲ್ಲದೇ, ಈ ಕುರಿತು ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಿಸುವ ಅವಶ್ಯಕತೆ ಇದೆ. ಅರಿವು ಮೂಡಿಸುವ ಕಾರ್ಯದಲ್ಲಿ ಮಾಧ್ಯಮದವರ ಪಾತ್ರವೂ ಸಹ ಅತಿಮುಖ್ಯವಾಗಿದೆ. ಮಾಧ್ಯಮಗಳ ಮೂಲಕವೂ ಪ್ರತಿದಿನ ಈ ಕುರಿತು ವ್ಯಾಪಕ ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಇಂದಿನ ಡಿಜಿಟಲೀಕರಣ ಯುಗದಲ್ಲಿರುವ ಎಲ್ಲ ಸಾಧನಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ತಂಬಾಕು ಉತ್ಪನ್ನ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಕೇವಲ ಕಾಯ್ದೆ-ಕಾನೂನುಗಳನ್ನು ಜಾರಿ ಮಾಡುವುದರಿಂದ ತಂಬಾಕು ಮುಕ್ತ ಸಮಾಜ ನಿರ್ಮಾಣವಾಗುವುದಿಲ್ಲ. ಕಾಯ್ದೆ-ಕಾನೂನುಗಳಿಂದ ಕಡಿವಾಣ ಹಾಕಬಹುದು. ಸಂಪೂರ್ಣ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಪಣ ತೊಡಬೇಕು ಅಂದಾಗ ಮಾತ್ರ ಯಶಸ್ಸು ಸಿಗಲಿದೆ ಎಂದು ಹೇಳಿದರು.
ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಅವರು ಮಾತನಾಡಿ, ವಿವಿಧ ಟಿವಿ ಮಾಧ್ಯಮ, ವ್ಯಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಜಾಹೀರಾತುಗಳಿಗೆ ಮರುಳಾಗಿ ಯುವ ಜನಾಂಗ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಪ್ರಸ್ತುತ ವಿವಿಧ ಕಾನೂನು-ಕಾಯ್ದೆಗಳ ಅನುಷ್ಠಾನದಿಂದ ಇಂತಹ ಜಾಹೀರಾತುಗಳ ಕಡಿವಾಣವಾಗಿದ್ದು, ಆಯಾ ಹಂತಗಳಲ್ಲಿಯೇ ಇದನ್ನು ತಡೆಗಟ್ಟಬೇಕು. ದುಶ್ಟಟಗಳಿಗೆ ಬಲಿಯಾದವರು ಕೇವಲ ತಾವೊಬ್ಬರೇ ಬಲಿಯಾಗುವುದಿಲ್ಲದೇ ಇತರರಿಗೂ ಪರಿಣಾಮ ಬೀರಿದ ಅನೇಕ ಉದಾಹರಣೆಗಳಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ-ಅರಿವು ಹೊಂದಬೇಕು. ವಿಶೇಷವಾಗಿ ಪಾಲಕರು ತಮ್ಮ ಮಕ್ಕಳ ಮೇಲೆ ನಿರಂತರವಾಗಿ ಗಮನ ಹರಿಸಿ ಯಾವುದೇ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕವಿತಾ ಅವರು ಮಾತನಾಡಿ, ಪ್ರತಿ ವರ್ಷ ಮೇ.೩೧ ರಂದು ವಿಶ್ವ ತಂಬಾಕು ರಹಿತ ದಿನವನ್ನಾಗಿ ಆಚರಿಸಲಾಗುತ್ತಿದೆ. ತಂಬಾಕು ಉತ್ಪನ್ನಗಳಿಂದ ಮಕ್ಕಳ ರಕ್ಷಣೆ ಕುರಿತು ವ್ಯಾಪಕವಾಗಿ ಪ್ರಚಾರ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಹೆಚ್ಚಾಗುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ವಿವಿಧ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾಧ್ಯಮಗಳು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿಕೊಂಡ ಅವರು, ಜಿಲ್ಲೆಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಮೇಲೆ ವಿವಿಧೆಡೆ ದಾಳಿ ನಡೆಸಿ ೧.೧೮ ಲಕ್ಷ ರೂ. ದಂಡ ಸಹ ವಿಧಿಸಲಾಗಿದೆ. ಈ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಮಾತನಾಡಿದರು. ಡಾ.ರೂಪಶ್ರೀ ಅತಿಥಿ ಉಪನ್ಯಾಸ ನೀಡಿದರು. ಹಿರಿಯ ಸಿವ್ಹಿಲ್ ನ್ಯಾಯಾಧೀಶ, ಡಿಎಚ್‌ಓ ಡಾ.ಬಸವರಾಜ ಹುಬ್ಬಳ್ಳಿ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ.ಎಸ್.ಎಲ್.ಲಕ್ಕಣ್ಣವರ, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಜೈಬುನ್ನೀಸಾ ಬೀಳಗಿ, ಡಾ.ರಾಜೇಶ್ವರಿ ಗೊಲಗೇರಿ, ತಾಲೂಕಾ ಆರೋಗ್ಯಾಧಿಕಾರಿ ಪರಶುರಾಮ ಹಿಟ್ನಳ್ಳಿ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್, ಜೈನರತ್ನ ಯುವಕ ಪರಿಷತ್‌ನ ವಿಜಯ ರುಣವಾಲ, ಕಾರ್ಯಕ್ರಮದ ಸಂಯೋಜಕ ಪ್ರಕಾಶ ಚವ್ಹಾಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯ ಸುರೇಶ ಹೊಸಮನಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.