ಸಿಂದಗಿ: ಈ ಬಾರಿ ಶೈಕ್ಷಣಿಕ ಬಲವರ್ಧನೆ ಎಂಬ ಅಡಿಬರಹದಲ್ಲಿ ಮಕ್ಕಳಿಗೆ ಪಾಠವನ್ನು ಹೇಳಲಾಗುತ್ತಿದೆ ಎಂದು ಶಿಕ್ಷಣ ಸಂಯೋಜಕ ಆನಂದ ಮಾಡಗಿ ಹೇಳಿದರು.
ಪಟ್ಟಣದ ಬಸವ ನಗರದಲ್ಲಿರುವ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ೨೦೨೪-೨೫ನೆಯ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾರದಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅಧ್ಯಯನದಿಂದ ಯಾರು ಹಿಂದೆ ಉಳಿಯಬಾರದು. ಮಕ್ಕಳು ವಿದ್ಯಾಭ್ಯಾಸದೆಡೆಗೆ ಹೆಚ್ಚಿನ ಗಮನ ಹರಿಸಬೇಕು. ಆತ್ಮ ವಿಶ್ವಾಸವಿದ್ದರೆ ಯಾವುದೇ ಭಾಷೆ ಕಲಿಯನಹುದು ಎಂದು ಸಲಹೆ ನೀಡಿದರು.
ಈ ವೇಳೆ ಸಿಆರ್‌ಪಿ ನೀಲಕಂಠ ತಿಳಗೂಳ ಮಾತನಾಡಿ, ಸರಕಾರದ ಎಲ್ಲ ಯೋಜನೆಗಳನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ಹೇಳಿದರು.
ಶೈಕ್ಷಣಿಕ ವರ್ಷದ ಮೊದಲ ದಿನದಂದು ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಪ್ರೀತಿಯಿಂದ ಪುಷ್ಪಗುಚ್ಚ, ಪುಸ್ತಕ, ಪೆನ್ನು, ಹಣ್ಣಿನ ರಸ, ಸಿಹಿ ಪದಾರ್ಥ ನೀಡಿ ನೀಡಿ ಭವ್ಯವಾಗಿ ಸ್ವಾಗತಿಸಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಶರಣಬಸವ ಲಂಗೋಟಿ, ಆಯ್.ಎಮ್.ವಾಲೀಕಾರ, ಎ.ಕೆ.ಬಿರಾದಾರ ಸೇರಿದಂತೆ ಶಾಲೆಯ ಶಿಕ್ಷಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

