ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಮನವಿ ಸಲ್ಲಿಸಿದ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ
ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವರದಿಗಾರ ಕಾನಿಪ ಸಂಘದ ಸದಸ್ಯ ಗುಂಡು ಕುಲಕರ್ಣಿ ಅವರು ಅಕ್ರಮ ಮರಳು ದಂದೆ ಕುರಿತು ವರದಿ ಮಾಡಿದ ಹಿನ್ನೆಲೆ ಪೊಲೀಸರಿಂದ ನಡೆದ ದೌರ್ಜನ್ಯ ವಿರೋಧಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಿಎಂ ಮಾಧ್ಯಮ ಸಲಹೆಗಾರರು ವಿಜಯಪುರ ಎಸ್ಪಿ ಅವರಿಗೆ ಕರೆ ಮಾಡಿ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳಿ. ಪತ್ರಕರ್ತರ ಸ್ಥಿತಿಯೇ ಹೀಗಾದರೆ ಹೇಗೆ ಅದನ್ನು ಪರಿಶೀಲನೆ ಮಾಡಿ ಸಂಬಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಿ. ಸರಕಾರಕ್ಕೆ ಕೆಟ್ಟ ಹೆಸರು ಬರದ ಹಾಗೇ ನೋಡಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಗುಂಡು ಕುಲಕರ್ಣಿ, ಗುರುರಾಜ ಮಠ ಸೇರಿದಂತೆ ಅನೇಕರಿದ್ದರು.