ಚಡಚಣ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ನಂ-೨ ಮರಡಿ ಶಾಲೆಯಲ್ಲಿ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಗುರುಗಳಾದ ಮಹಾಂತೇಶ ಉಮರಾಣಿಯವರು ವಹಿಸಿದ್ದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿಕ್ಷಕ ಬಸವರಾಜ ಕರಜಗಿ ಅವರು ನಮ್ಮ ಸರ್ಕಾರಿ ಶಾಲೆಯಲ್ಲಿ ದೊರೆಯುವ ಎಲ್ಲ ಸವಲತ್ತುಗಳ ಕುರಿತು ಮಾಹಿತಿ ನೀಡಿದರು.
ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನದ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ, ಈ ವರ್ಷದ ಧ್ಯೇಯ ವಾಕ್ಯ ಶೈಕ್ಷಣಿಕ ಬಲವರ್ಧನೆಯ ಮೂಲಕ ಮಕ್ಕಳಲ್ಲಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರ ಸಾಮರ್ಥ್ಯವನ್ನು ಬೆಳೆಸುವುದು. ಮಕ್ಕಳಿಗೆ ಪಠ್ಯೇತರ ಚಟುವಟಿಗಳ ಮೂಲಕ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲಾಗುವುದೆಂದು ತಿಳಿಸಿದರು.
ಮಕ್ಕಳ ಪೌಷ್ಟಿಕಾಂಶ ಕೊರತೆ ನೀಗಿಸಲು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚೆಕ್ಕಿ ವಿತರಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿದ ಶ್ರೀಮತಿ ರೇಣುಕಾ ಗೌರ ಗುರುಮಾತೆಯರಿಗೆ ಸಾಂಕೇತಿಕವಾಗಿ ಗೌರವಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಎಂ ಎಸ್ ನಿಂಬಾಳಕರ, ವಿ ಎಸ್ ಪತ್ತಾರ, ಮಾದೇವ ಆದಿಗೊಂಡೆ, ಎಚ್ ಜೆ ಲೋಣಿ,ಗೀತಾ ಮಾಳಿ, ಅಡುಗೆ ಸಹೋದರಿಯರಾದ ಮಾನಂದ ಧೋತ್ರೆ, ಸಫೂರಾ ಲಟೋರಿ, ಸವಿತಾ ವಾಲಿಕಾರ, ರಕಮಬಾಯಿ ವಾಘಮೋರೆ, ಕಸ್ತೂರಿ ಸಾಲಮಂಟಪ ಉಪಸ್ಥಿತರಿದ್ದರು.
ದುಂಡಪ್ಪ ಬಗಲಿ ಸ್ವಾಗತಿಸಿ, ನಿರೂಪಿಸಿದರು. ಸುರೇಖಾ ಝುಲ್ಪಿ ಪ್ರಾರ್ಥಿಸಿದರು. ಜಯಶ್ರೀ ಗೊಟ್ಯಾಳ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

