ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ಶನಿವಾರ ಭೇಟಿ ನೀಡಿ ಬೆಂಬಲ ಸೂಚಿಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ವಿಠ್ಠಲ ಹೊಸಪೇಟೆ, ಜವಾಹಾರ ಗೋಸಾವಿ, ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಮಹೇಶ ಒಡೆಯರ, ವಿಡಿಎ ಮಾಜಿ ಸದಸ್ಯ ಮಡಿವಾಳ ಯಾಳವಾರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ ಸೇರಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

