ದೇವರಹಿಪ್ಪರಗಿ: ವ್ಯಸನಮುಕ್ತ ಬದುಕಿನಿಂದ ಮಾತ್ರ ನಾವೆಲ್ಲ ಸುಂದರ ಜೀವನ ಹಾಗೂ ಸಮಾಜ ಕಟ್ಟಿಕೊಳ್ಳಬಹುದಾಗಿದೆ ಎಂದು ವಿಶ್ರಾಂತ ಪ್ರಾಧ್ಯಾಪಕ ಎಸ್.ಎನ್.ಬಸವರೆಡ್ಡಿ ಹೇಳಿದರು.
ತಾಲ್ಲೂಕಿನ ಜಾಲವಾದ ಗ್ರಾಮದ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇಗೀಗ ಶಾಲಾ ವಿದ್ಯಾರ್ಥಿಗಳ ಬ್ಯಾಗಗಳಲ್ಲಿ ಗುಟುಕಾ ಚಿಟ್ಸ್ ದೊರೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಇಂಥ ವ್ಯಸನಗಳ ಕುರಿತು ಯುವಕರು, ವಿದ್ಯಾರ್ಥಿಗಳು ಜಾಗೃತರಾಗಬೇಕು. ಕರ್ನಾಟಕ ತಂಬಾಕು ಮುಕ್ತ ನಾಡಾಗಬೇಕು. ಅದಕ್ಕಾಗಿ ತಂಬಾಕು ಉತ್ಪನ್ನಗಳಾದ ಗುಟುಕಾ, ಮಾವಾ, ನಿಕೋಟಿನ್ ಮಿಶ್ರಿತ ಕಿಮಾಮ್‌ಗಳ ಸೇವನೆಯಿಂದ ಯುವಪೀಳಿಗೆ ಹೊರಬರಬೇಕು. ಅದಕ್ಕಾಗಿ ಮನೆಯಲ್ಲಿ ಮಾತೆಯರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪಿ.ಎಸ್.ಮಿಂಚನಾಳ ಮಾತನಾಡಿ, ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ಗಂಭೀರ ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿ, ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನ ತಂಬಾಕು ಸೇವನೆಯ ವ್ಯಸನದಿಂದ ದೂರ ಉಳಿಯಬೇಕು ಎಂದರು. ವಲಯ ಮೇಲ್ವಿಚಾರಕ ಬಾಬುರಾವ್ ಗೋಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಕೆಂಗುಟಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಪದಾಧಿಕಾರಿ ಜ್ಯೋತಿ ಮಣ್ಣೂರ, ಸ್ಥಳೀಯ ಸೇವಾಪ್ರತಿನಿಧಿ ಮಹಾದೇವಿ ದಿಡ್ಡಿಮನಿ, ಅಜೀತ ತೊರವಿ ಸೇರಿದಂತೆ ಸಂಘದ ಸದಸ್ಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

