ಬಸವನಬಾಗೇವಾಡಿ: ರಾಜ್ಯದಲ್ಲಿ ವಿಧಾನಪರಿಷತ್ತಿನ ೧೩ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ವರಿಷ್ಠರು ಜಿಲ್ಲೆಯಲ್ಲಿ ಯಾರಿಗಾದರೂ ಇದರಲ್ಲಿ ಒಂದು ಸ್ಥಾನ ನೀಡಬೇಕು ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ನಿಷ್ಠಾವಂತ ಕಾರ್ಯಕರ್ತರು ನಿರಂತರವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಇಂತಹ ಕಾರ್ಯಕರ್ತರನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಗುರುತಿಸಿ ಅವರಿಗೆ ವಿಧಾನಪರಿಷತ್ತಿನ ಟಿಕೆಟ್ ನೀಡಿದರೆ ವಿಜಯಪುರ ಜಿಲ್ಲೆಗೆ ಒಂದು ಸ್ಥಾನ ನೀಡಿದಂತಾಗುತ್ತದೆ. ಯಾವುದೇ ಸಮಾಜ ಬಾಂಧವರಿಗೆ ಟಿಕೆಟ್ ನೀಡುವದರಿಂದಾಗಿ ಜಿಲ್ಲೆಯಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ. ಇದು ಜಿಲ್ಲೆಗೆ ಮತ್ತಷ್ಟು ಅನುಕೂಲವಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ರಮಜಾನ ಹೆಬ್ಬಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
