ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೀಮನಗೌಡ ಎಂ. ಸಿಂಗನಳ್ಳಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಪರಮಪೂಜ್ಯ ಚೆನ್ನವೀರ ಸ್ವಾಮೀಜಿಯರ ಕೃಪಾಶೀರ್ವಾದೊಂದಿಗೆ ಸಂಸ್ಥೆಯ ಚೇರಮನ್ನ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಈ ಭಾಗವನ್ನು ಶೈಕ್ಷಣಿಕ ಕೇಂದ್ರವನ್ನಾಗಿಸುವ ಸಂಕಲ್ಪ ತೊಟ್ಟಿದ್ದಾರೆ. ಗುಣಮಟ್ಟಕ್ಕೆ ಮತ್ತೊಂದು ಹೆಸರಾಗಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಇಂದು ಸಮಾಜದಲ್ಲಿ ಗುರುತಿಸಿಕೊಂಡಿದೆ. ಎಲ್ಲರೂ ಜತೆಜತೆಯಾಗಿ ಹೆಜ್ಜೆ ಹಾಕಿದರೆ ಸಂಸ್ಥೆ ಮತ್ತಷ್ಟು ಉನ್ನತಿಯನ್ನು ಸಾಧಿಸುವುದರಲ್ಲಿ ಅನುಮಾನವಿಲ್ಲ. ಈ ಸಂಸ್ಥೆ ಅತ್ಯಂತ ನನ್ನ ಮೇಲೆ ವಿಶ್ವಾಸ ಇರಿಸಿ ಗುರುತರ ಜವಾಬ್ದಾರಿ ನೀಡಿದೆ ಇದನ್ನು ನಿರ್ವಹಿಸುವಲ್ಲಿ ಎಲ್ಲರ ಸಹಕಾರದ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ವಿವೇಕಾನಂದ ಸಾಲಿಮಠ, ಆಡಳಿತಾಧಿಕಾರಿ ಬಿ.ಜಿ.ಮಠ, ನಿವೃತ್ತ ಪ್ರಾಚಾರ್ಯ ವಿಮಲಕಾಂತ ಪಾಟೀಲ, ಡಾ. ವಿಶ್ವನಾಥ ನಂದಿಕೋಲ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

