ಚಿಮ್ಮಡ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಸತತವಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಕ್ಕೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಮದ್ಯಾಹ್ನ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರ ಹೆಚ್ಚುತಿದ್ದಂತೆಯೇ ಪಟಾಕಿ ಸಿಡಿಸುತ್ತ ಬೈಕ್ ರ‍್ಯಾಲಿ ಮೂಲಕ ಗ್ರಾಮದ ತುಂಬೆಲ್ಲ ಪ್ರದಕ್ಷಣೆ ಹಾಕಿದರು ನಂತರ ಪಕ್ಷದ ಕಛೇರಿ ಮುಂದೆ ಗುಲಾಲು ಎರಚುತ್ತ ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಭು ಪಾಲಭಾವಿ, ಆನಂದ ಕವಟಿ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ, ಪ್ರಭು ಮುಧೋಳ, ಗ್ರಾ.ಪಂ. ಸದಸ್ಯ ಮನೋಜ ಹಟ್ಟಿ, ನಾಗಪ್ಪ ಆಲಕನೂರ ತುಕಾರಾಮ ದೊಡಮನಿ, ಬಸವರಾಜ ಬಿಜಾಪೂರ, ಅಮಜದಖಾನ ಜಮಖಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು
Subscribe to Updates
Get the latest creative news from FooBar about art, design and business.
Related Posts
Add A Comment

