Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ :ಸಿಇಓ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ :ಸಿಇಓ ರಿಷಿ ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಷಿ ಆನಂದ ಹೇಳಿದರು.
ಜಿಲ್ಲಾ ಪಂಚಾಯತ ಹಾಗೂ ಸಮಾಜಿಕ ಅರಣ್ಯ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ
“ವಿಶ್ವ ಪರಿಸರ ದಿನಾಚರಣೆ ” ಕಾರ್ಯಕ್ರಮದಲ್ಲಿ ಗಿಡ ನೆಟ್ಟು, ನೀರುಣಿಸಿ ಅವರು ಮಾತನಾಡಿದರು.
ಪ್ರಕೃತಿ ಸಂಪನ್ಮೂಲವನ್ನು ನಮಗೆ ಅವಶ್ಯಕತೆ ಇದ್ದಷ್ಟು ಮಾತ್ರ ಉಪಯೋಗಿಸೋಣ, ಅವಶ್ಯಕತೆಗಿಂತ ಹೆಚ್ಚು ಉಪಯೋಗ ಮಾಡದೇ ನಮ್ಮ ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಸಿಲಿನ ತಾಪಮಾನ ಇರುವುದರಿಂದ ಸಸಿಗಳನ್ನು ನೆಡುವುದು ಹಾಗೂ ಜಲ ಸಂರಕ್ಷಣೆ ಮಾಡುವುದು ಅವಶ್ಯಕವಾಗಿದೆ. ಜಲಸಂರಕ್ಷಣೆಗೆ ಅತ್ಯಂತ ಸೂಕ್ತ ವಿಧಾನ “ಮಳೆನೀರು ಕೊಯ್ಲು” ಈ ವಿಧಾನವನ್ನು ನಾವು ಅಳವಡಿಸಿಕೊಂಡು ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.
ಮಾನವ ಮಾತ್ರ ಪ್ರಕೃತಿಯ ವಿಚಾರದಲ್ಲಿ ನಿರ್ದಯವಾಗಿದ್ದಾನೆ. ಮಾನವರು ನೈಸರ್ಗಿಕ ಸಂಪನ್ಮೂಲವನ್ನು ದಿನೇ ದಿನೇ ಹಾಳುಗೆಡುವುತ್ತಿದ್ದಾರೆ. ಕಾಡುಗಳನ್ನು ಕಡಿದು ಮಾಲಿನ್ಯ ಹಾಗೂ ಜಾಗತಿಕ ತಾಪಮಾನ ಹೆಚ್ಚಲು ಕಾರಣರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಂತೂ ಪರಿಸರ ಹಾನಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದಕ್ಕೆ ಈ ವರ್ಷದ ಬಿಸಿಲಿಗಿಂತ ಉತ್ತಮ ಉದಾಹರಣೆ ಬೇಕಿಲ್ಲ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕು. ಪರಿಸರವನ್ನು ರಕ್ಷಿಸುವ ಕಾಯಕದಲ್ಲಿ ಇಂದಿನಿಂದಲೇ ತೊಡಗಬೇಕು ಎಂದು ಕರೆ ನೀಡಿದರು.
ನಾವು ಪರಿಸರದ ಬಗ್ಗೆ ಜಾಗೃತರಾಗಿದ್ದರೆ ಮಾತ್ರ ಸಾಲದು ಪ್ರಕೃತಿ ನಮಗೆ ಒದಗಿಸುತ್ತಿರುವ ಎಲ್ಲ ಅವಶ್ಯಕತೆಗಳಿಗೂ ನಾವು ಹೆಚ್ಚಿನ ಗೌರವ ಮತ್ತು ಕಾಳಜಿಯನ್ನು ನೀಡಬೇಕಾಗಿದೆ. ಇದರ ಬಗ್ಗೆ ನಾವಷ್ಟೇ ಅಲ್ಲದೇ ಇತರರಿಗೂ ತಿಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಪರಿಸರವನ್ನು ನಮಗೆ ಮಾತ್ರವಲ್ಲದೆ ಮುಂದಿನ ಪೀಳಿಗೆಗೂ ಸಹ ದೊರಕುವಂತೆ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ಬಿ. ಎಸ್. ಮೂಗನೂರಮಠ, ಯೋಜನಾ ನಿರ್ದೇಶಕ ಸಿ. ಆರ್. ಮುಂಡರಗಿ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬು ಚವ್ಹಾಣ, ವಲಯ ಅರಣ್ಯಾಧಿಕಾರಿ ಗಿರೀಶ ಹಲಕುಡೆ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ ಅಲ್ಲಾಪೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಹಾಗೂ ಜಿಲ್ಲಾ ಪಂಚಾಯತಿಯ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.