ಚಡಚಣ: ವಿಶ್ವ ಪರಿಸರ ದಿನವನ್ನು ಪರಿಸರವನ್ನು ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಪರಿಸರ ಉಳಿಸಲು ಎಲ್ಲರೂ ಒಗ್ಗೂಡುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವ ಗುರಿಯನ್ನು ಹೊಂದಿದೆ. ಹೀಗಾಗಿ ಈ ದಿನದಂದು ಪರಿಸರ ಉಳಿಸುವ ಜಾಗೃತಿ ಕಾರ್ಯಕ್ರಮಗಳು ಹಾಗೂ ಮರ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಡೋಣ ಎಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಎಂ.ಎಸ್.ಪಾಟೀಲ ಹೇಳಿದರು.
ಬುಧವಾರದಂದು ಪ್ರೌಢ ಶಾಲೆಯಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು. ಮಾನವನ ಸ್ವಾರ್ಥಭರಿತ ಚಟುವಟಿಕೆಗಳಿಂದ ದಿನೇ ದಿನೇ ಪ್ರಕೃತಿಯೂ ಹಾಳಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮನುಷ್ಯನು ಕುರುಡಾಗಿ ವರ್ತಿಸುತ್ತಿದ್ದಾನೆ. ಅತಿಯಾದ ಕಾಡುಗಳ ನಾಶದಿಂದ ಮುಂಬರುವ ದಿನಗಳ್ಲೂ ಉಸಿರಾಡಲು ಆಮ್ಲಜನಕವೇ ಇಲ್ಲವಾದರೆ, ಬದುಕಿಳಿಯುವುದು ಕಷ್ಟವೇ. ಹೀಗಾಗಿ ಪರಿಸರದ ಬಗ್ಗೆ ಹೆಚ್ಚೆಚ್ಚು ಕಾಳಜಿ ವಹಿಸುವ ಜವಾಬ್ದಾರಿಯೂ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ ೫ ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ವಿಜ್ಞಾನ ಶಿಕ್ಷಕರಾದ ಆರ್.ಎಚ್. ನದಾಫ್‌ರವರು ಮಾತನಾಡುತ್ತ. ಪ್ರಕೃತಿ ಮಾತೆ ನಮ್ಮೆಲ್ಲರನ್ನೂ ಸಲಹುವ ತಾಯಿ. ಭೂಮಿಯು ಜಗತ್ತಿನ ಸಕಲ ಜೀವಿಗಳು ವಾಸಿಸುವ ವಿಶಾಲವಾದ ಮನೆ ಎಂದರೂ ತಪ್ಪಾಗಲಿಕ್ಕಿಲ್ಲ. ನಾವು ಹುಟ್ಟಿದಾಗಿನಿಂದ ಸಾಯುವವರೆಗೂ ಭೂದೇವಿಯು ನಮ್ಮನ್ನು ತನ್ನ ಮಡಲಿಲ್ಲಿಟ್ಟುಕೊಂಡು ಜೋಪಾನ ಮಾಡುತ್ತಾಳೆ. ಭೂಮಿತಾಯಿಯು ನಮ್ಮ ಬದುಕಿಗೆ ಅವಶ್ಯವಿರುವ ಎಲ್ಲವನ್ನೂ ನೀಡುತ್ತಾಳೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲವನ್ನು ದಿನೇ ದಿನೇ ಹಾಳುಗೆಡುವುತ್ತಿದ್ದಾರೆ. ಕಾಡುಗಳನ್ನು ಕಡಿದು ಮಾಲಿನ್ಯ ಹಾಗೂ ಜಾಗತಿಕ ತಾಪಮಾನ ಹೆಚ್ಚಲು ಕಾರಣರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಂತೂ ಪರಿಸರ ಹಾನಿ ಎಷ್ಟರಮಟ್ಟಿಗೆ ಆಗಿದೆ ಎಂಬುದಕ್ಕೆ ಈ ವರ್ಷದ ಬಿಸಿಲಿಗಿಂತ ಉತ್ತಮ ಉದಾಹರಣೆ ಬೇಕಿಲ್ಲ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ಶಾಲೆಯ ಶಿಕ್ಷಕರುಗಳಾದ ಆರ್.ಎಂ.ಚೋಪಡೆ, ಎಂ.ಎನ್.ಹೋಕಳೆ, ಡಿ.ಜಿ.ಭಂಢರಕೋಟೆ, ಎಂ.ಸಿ.ಮಾಳಾಬಗಿ, ರಮೇಶ ತಳಕೇರಿ, ಪ್ರಶಾಂತ ಐಹೋಳ್ಳಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

