ಸಿಂದಗಿಯ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ | ವಿದ್ಯಾರ್ಥಿಗಳಿಗೆ ಸಸಿ ವಿತರಣೆ
ಸಿಂದಗಿ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರ ಉಳಿದರೆ ಮಾತ್ರ ನಮಗೆ ಆರೋಗ್ಯಕರವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಹೇಳಿದರು.
ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಸ್ಕೌಟ್ಸ್ ಗೈಡ್ಸ್ ಘಟಕಗಳ ಸಹಯೋಗದಲ್ಲಿ ಬುಧವಾರ ವಿಶ್ವ ಪರಿಸರ ದಿನದಂದು ಸಸಿ ನೆಟ್ಟು ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿಯನ್ನು ವಹಿಸಬೇಕು. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ ಬೇಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಈ ಸಂಧರ್ಭದಲ್ಲಿ ಎನ್.ಎಸ್.ಎಸ್ ಘಟಕದ ಸಂಯೋಜಕ ಡಾ.ಶಾಂತುಲಾಲ ಚವ್ಹಾಣ ಮಾತನಾಡಿದರು.
ಈ ವೇಳೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಸಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ಬಿ.ಕುಲಕರ್ಣಿ, ಉಪನ್ಯಾಸಕರಾದ ಬಿ.ಎಸ್.ಬಿರಾದಾರ, ಎಸ್.ಎ.ಪಾಟೀಲ, ಆರ್.ಬಿ.ಹೊಸಮನಿ, ಎಮ್.ಎನ್.ಅಜ್ಜಪ್ಪ, ಎಫ್.ಎ.ಹಾಲಪ್ಪನವರ, ಮುಕ್ತಾಯಕ್ಕ ಕತ್ತಿ, ಸಿದ್ದಲಿಂಗ ಕಿಣಗಿ, ಎ.ಬಿ.ಪಾಟೀಲ, ಎಸ್.ಎ.ಬಸರಕೋಡ, ಸುರೇಶ ಮಂಗೊAಡಿ, ಜ್ಯೋತಿ ಚೆನ್ನೂರ, ಎಮ್.ಎಸ್.ಡುಮಕನಾಳ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇಂದಿರಾ ಗಾಂದಿ ಶಾಲೆ:
ಪಟ್ಟಣದ ಗ್ಲೋಬಲ್ ಸ್ಮಾರ್ಟ್ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಇಂದಿರಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಮಾತೆ ರೇಖಾ ಕಟಕೆ ಸಸಿ ನೆಟ್ಟು ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ನಮ್ಮ ಎಲ್ಲರ ಕರ್ತವ್ಯವಾಗಿದೆ. ಪರಿಸರ ಉಳಿದರೆ ಮಾತ್ರ ನಮಗೆ ಆರೋಗ್ಯಕರವಾದ ಜೀವನವನ್ನು ನಡೆಸಲು ಸಾಧ್ಯ. ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿಯನ್ನು ವಹಿಸಬೇಕು. ಹಾಗೂ ಭೂದೇವಿಯನ್ನು ರಕ್ಷಿಸುವ ಕಾಯಕದಲ್ಲಿ ಇಂದಿನಿಂದಲೇ ತೊಡಗಬೇಕು. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ, ಅರಣ್ಯನಾಶ ಮತ್ತು ಜೀವವೈವಿಧ್ಯದ ನಷ್ಟದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು
ಈ ವೇಳೆ ವಿದ್ಯಾರ್ಥಿಗಳಿಂದ ಸಸಿಗಳು ನೆಡುವ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಕ್ರಿಯೇಟಿವ್ ಕಿಡ್ಸ್ ಶಾಲೆ:
ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನವನ್ನು ಮಕ್ಕಳಿಂದ ಗಿಡ ನೆಡುವ ಮೂಲಕ ಆಚರಿಸಲಾಯಿತು. ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ ಮಾತನಾಡಿ, ಜೀವ ಸಂಕುಲವನ್ನು ರಕ್ಷಿಸುತ್ತಿರುವ ಪರಿಸರವನ್ನು ನಾವೆಲ್ಲರೂ ರಕ್ಷಣೆ ಮಾಡುವುದರೊಂದಿಗೆ ಪೂಜಿಸಬೇಕು. ಪರಿಸರ ರಕ್ಷಣೆ ಬಗ್ಗೆ ನಾವು ಜಾಗೃತರಾಗುವ ಜೊಗೆಗೆ ಮಕ್ಕಳಿಗೆ ಪರಿಸರ ರಕ್ಷಣೆ ಬಗ್ಗೆ ತಿಳಿ ಹೇಳಬೇಕು ಎಂದರು.
ಲಕ್ಷಿಂಬಾಯಿ ಪೂಜಾರ, ಸಂಸ್ಥೆಯ ಕಾರ್ಯದರ್ಶಿ, ಮುಖ್ಯಗುರುಮಾತೆ ಡಾ.ಜ್ಯೋತಿ ಪೂಜಾರ, ವಿದ್ಯಾ ಪೂಜಾರ, ವರ್ಷಾ ಪೂಜಾರ ಹಾಗೂ ಶಿಕ್ಷಕಿಯರಾದ ಅಶ್ವಿನಿ ಲೋಣಿ, ಸುಮಂಗಲಾ ಬಮ್ಮಣ್ಣಿ, ಸಾಧನಾ ಇಮಡೆ, ಗೌರಿ ಪಾಟೀಲ, ಶಾಂತಾ ಮೊಸಲಗಿ, ಸ್ನೇಹಾ ದೇಶಪಾಂಡೆ, ಸುಕನ್ಯಾ ಹುಬ್ಬಳ್ಳಿ, ಸಿಬ್ಬಂದಿಗಳಾದ ಶ್ರೀಶೈಲ ಹೂಗಾರ, ಅಂಬಿಕಾ ಕರಿವಿನಶೆಟ್ಟಿ, ಹೇಮಾ ಬಡಿಗೇರ ಹಾಗೂ ಪಾಲಕರು ಇದ್ದರು.

