Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ
(ರಾಜ್ಯ ) ಜಿಲ್ಲೆ

ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಇಂದು ಮರಗಳ ಸಂಖ್ಯೆ ಕಡಿಮೆಯಾಗಿರುವದರಿಂದ ಉಷ್ಣತೆ ಪ್ರಮಾಣ ಹೆಚ್ಚಳವಾಗಿದೆ. ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಿವ್ಹಿಲ್ ನ್ಯಾಯಾಧೀಶೆ ತೇಜಶ್ವಿನಿ ಸೊಗಲದ ಹೇಳಿದರು.
ತಾಲೂಕಿನ ಇವಣಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮರ-ಗಿಡಗಳನ್ನು ನಾಶ ಮಾಡುತ್ತಿರುವದರಿಂದ ಬಿಸಿಲಿನ ತೀವ್ರತೆ ಹೆಚ್ಚಳವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಜಮೀನಿನ ಬದುಗಳಲ್ಲಿ ಮರ-ಗಿಡಗಳನ್ನು ಬೆಳೆಸಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮುಂದೆಯೂ ಮರ-ಗಿಡಗಳನ್ನು ಬೆಳೆಸುವಂತಾಗಬೇಕು. ಮರಗಳನ್ನು ಬೆಳೆಸುವದರಿಂದ ಎಲ್ಲರಿಗೂ ಆಮ್ಲಜನಕ ಸಿಗುವ ಮೂಲಕ ಎಲ್ಲರೂ ಆರೋಗ್ಯವಂತರಾಗಿ ಇರಲು ಸಾಧ್ಯ.ದೇವರ ಸೇವೆಯ ಜೊತೆಗೆ ಸಮಾಜದಲ್ಲಿ ತೊಡಗಿ ಗಿಡಮರಗಳನ್ನು ಬೆಳೆಸಿದಾಗ ದೇವರಿಗೆ ಸಂತೋಷವಾಗುತ್ತದೆ. ಪ್ರತಿಯೊಬ್ಬರೂ ಆರೋಗ್ಯವಂತರಾಗಿ ನೆಮ್ಮದಿ ಜೀವನ ಮಾಡಲು ಸಾಧ್ಯ ಎಂದರು.
ನ್ಯಾಯವಾದಿ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ. ಗಿಡ-ಮರಗಳನ್ನು ಕಾಪಾಡಿಕೊಳ್ಳಬೇಕು. ಜಲಮಾಲಿನ್ಯವಾಗದಂತೆ ನೋಡಿಕೊಳ್ಳುವ ಮೂಲಕ ಜಲಸಂಪನ್ಮೂಲಗಳನ್ನು ರಕ್ಷಿಸಬೇಕು.ಸೌರ ವಿದ್ಯುತ್ ಬಳಕೆ ಹೆಚ್ಚು ಮಾಡಬೇಕಿದೆ. ಪರಿಸರ ಸಂರಕ್ಷಣೆಯಲ್ಲಿ ಸರ್ಕಾರದೊಂದಿಗೆ ಜನರ ಪಾತ್ರವೂ ತುಂಬಾ ಅಗತ್ಯವಿದೆ ಎಂದರು.
ಹಿರಿಯ ವಕೀಲ ಜಿ.ಬಿ.ಬಾಗೇವಾಡಿ ಮಾತನಾಡಿ, ಜಿಲ್ಲೆಯಲ್ಲಿ ಪರಿಸರ ದಿನಾಚರಣೆಯಂದು ಪ್ರತಿವರ್ಷ ಸಸಿಗಳನ್ನು ನೆಡಲಾಗುತ್ತದೆ. ಇದರಲ್ಲಿ ಕೆಲವು ಸಸಿಗಳು ಮಾತ್ರ ಬೆಳೆಯುತ್ತವೆ. ಜನರ ನಿರ್ಲಕ್ಷ್ಯ, ಕಾಳಜಿ ವಹಿಸದೇ ಇರುವದರಿಂದಾಗಿ ಉಳಿದ ಉಳಿದ ಸಸಿಗಳು ಬೆಳೆಯುವುದಿಲ್ಲ. ಜನರು ಪರಿಸರ ಕಾಳಜಿ ವಹಿಸಬೇಕು. ಅದೇ ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಾವು ಎಲ್ಲಿ ನೋಡಿದರೂ ಮರ-ಗಿಡಗಳನ್ನು ನೋಡುತ್ತೇವೆ. ಅಲ್ಲಿನ ಜನರಿಗೆ ಪರಿಸರದ ಪ್ರಜ್ಞೆ ಇರುವದರಿಂದಾಗಿ ಮರ-ಗಿಡಗಳನ್ನು ಸಂರಕ್ಷಿಸಿ ಹೆಚ್ಚು ಬೆಳೆಯುವಂತೆ ಮಾಡುತ್ತಾರೆ. ಅವರು ಸುಖಕರ, ಆರೋಗ್ಯವಾದ ಬದುಕನ್ನು ನಡೆಸುತ್ತಾರೆ. ಇಂದಿನ ಯುವಜನಾಂಗ ಪರಿಸರದ ಮಹತ್ವ ಅರಿತುಕೊಂಡು ಪರಿಸರ ಸಂರಕ್ಷಣೆ ಮಾಡಬೇಕು. ಹೆಚ್ಚು ಮರ-ಗಿಡಗಳು ಬೆಳೆಯುವಂತೆ ನೋಡಿಕೊಳ್ಳಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಆರ್.ಎ.ಇನಾಮದಾರ ಮಾತನಾಡಿ, ನಮ್ಮ ಶಾಲೆಯಲ್ಲಿ ಪರಿಸರ ದಿನಾಚರಣೆ ಹಮ್ಮಿಕೊಂಡಿರುವದು ನಮ್ಮೆಲ್ಲರಿಗೂ ಸಂತಸ ತಂದಿದೆ. ಶಾಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಒಂದೊಂದು ಸಸಿಗಳನ್ನು ದತ್ತು ಪಡೆದುಕೊಂಡು ಶಾಲಾ ಆವರಣದಲ್ಲಿ ಬೆಳೆಸುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಇರ್ಶಾದಅಹ್ಮದ ನೇವಾರ, ಉಪವಲಯ ಅರಣಾಧಿಕಾರಿ ಎಸ್.ವ್ಹಿ. ಘೋರ್ಪಡೆ, ಸಹಾಯಕಿ ಸರ್ಕಾರಿ ಅಭಿಯೋಜಕಿ ಬಿ.ಎಸ್.ಬೆಳ್ಳೂಳ್ಳಿ, ವಕೀಲರಾದ ಜಿ.ಆರ್.ಬೀಳಗಿ, ಎಸ್.ಎಲ್.ಕಳ್ಳಿಗುಡ್ಡ, ನರಲಸಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗನಗೌಡ ಬಿರಾದಾರ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಪೂಜಾರಿ, ಗ್ರಾಪಂ ಸದಸ್ಯರಾದ ಶ್ರೀಕಾಂತಪ್ಪ ಹಿರೇಕುರಬರ, ರೇಣುಕಾ ಚವನಬಾವಿ, ಗಸ್ತು ವನಪಾಲಕರಾದ ಎಸ್.ಕೆ.ಹಚ್ಯಾಳ, ಎಂ.ಎಸ್.ಖಾನಾಪುರ ಇತರರು ಇದ್ದರು. ಎಚ್.ಸಿ.ಹಳ್ಳಿ ಸ್ವಾಗತಿಸಿದರು. ಶ್ರೀಕಾಂತ ಡಿ.ಎಂ.ನಿರೂಪಿಸಿದರು. ಪಿ.ಐ. ಹಿರೇಮಠ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.