ಬಸವನಬಾಗೇವಾಡಿ: ನಮಗೆ ಇರುವುದೊಂದೇ ಭೂಮಿ. ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ ಎಂಬುದು ಸಾರ್ವತ್ರಿಕವಾದ ಆಶಯ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು ಮಾತನಾಡಿದ ಅವರು, ಪರಿಸರ ಮಾಲಿನ್ಯ ಜಗತ್ತನ್ನು ಅತ್ಯಂತ ತೀವ್ರವಾಗಿ ಕಾಡುತ್ತಿರುವ ಈ ಸಂದರ್ಭದಲ್ಲಿ ಪ್ರಕೃತಿಯನ್ನು ಉಳಿಸಿಕೊಳ್ಳುವುದೇ ಮಹತ್ವದ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಜನಜಾಗೃತಿ ಅಭಿಯಾನಕ್ಕೆ ಪ್ರತಿವರ್ಷ ಜೂನ್ 5ರಂದು ಆಚರಣೆಯಾಗುವ ವಿಶ್ವ ಪರಿಸರ ದಿನವೂ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ. ಗಿಡಮರಗಳನ್ನು ಬೆಳೆಸುವುದರ ಮೂಲಕ ಸುಂದರವಾದ ಪರಿಸರವನ್ನು ಬೆಳೆಸುವುದು ಹಾಗೂ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೇ ಪ್ರಾಣಿ, ಪಕ್ಷಿಗಳು ಸೇರಿದಂತೆ ಪ್ರತಿಯೊಂದು ಜೀವಸಂಕುಲ ಆಹಾರ, ಗಾಳಿ ,ನೀರು, ಇತರೇ ಅಗತ್ಯಗಳಿಗಾಗಿ ಪರಿಸರವನ್ನು ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗಿಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ದುರಾಸೆಯಿಂದ ಗಾಳಿ ನೀರು ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವು ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಶ್ರೀಕಾಂತ್ ಕೊಟ್ರಶೆಟ್ಟಿ, ಸಂಜು ಬಿರಾದಾರ, ಜಟ್ಟಿಂಗರಾಯ ಮಾಲಗಾರ, ಮನ್ನಾನ ಶಾಬಾದಿ, ಮಂಜು ಜಾಲಗೇರಿ, ವೀರೇಶ ಗಬ್ಬೂರ, ಮಂಜುನಾಥ ಚಿಕ್ಕೊಂಡ, ಮಹಾಂತೇಶ ಹೆಬ್ಬಾಳ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

