Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತರಾಖಂಡದಲ್ಲಿ ರಾಜ್ಯದ 9 ಚಾರಣಿಗರ ದುರ್ಮರಣ!
(ರಾಜ್ಯ ) ಜಿಲ್ಲೆ

ಉತ್ತರಾಖಂಡದಲ್ಲಿ ರಾಜ್ಯದ 9 ಚಾರಣಿಗರ ದುರ್ಮರಣ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡ ಕರ್ನಾಟಕದ ಒಂಬತ್ತು ಚಾರಣಿಗರ ಮೃತದೇಹಗಳನ್ನು ಶುಕ್ರವಾರ ದೆಹಲಿ ಮೂಲಕ ಬೆಂಗಳೂರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 29 ರಂದು ಉತ್ತರಕಾಶಿಯಿಂದ 35 ಕಿಮೀ ದೂರದ ಚಾರಣಕ್ಕೆ 22 ಸದಸ್ಯರ ಟ್ರೆಕ್ಕಿಂಗ್ ತಂಡವನ್ನು ಮನೇರಿಯ ಹಿಮಾಲಯನ್ ವ್ಯೂ ಟ್ರೆಕ್ಕಿಂಗ್ ಏಜೆನ್ಸಿಯಿಂದ ಕಳುಹಿಸಲಾಗಿತ್ತು. ಈ ತಂಡದಲ್ಲಿ ಕರ್ನಾಟಕದ 18 ಚಾರಣಿಗರು ಮತ್ತು ಮಹಾರಾಷ್ಟ್ರದ ಓರ್ವರ ಜೊತೆಗೆ ಮೂವರು ಸ್ಥಳೀಯ ಮಾರ್ಗದರ್ಶಕರಿದ್ದರು.
ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಡೆಹ್ರಾಡೂನ್ ವಿಮಾನ ನಿಲ್ದಾಣದಿಂದ ಎಲ್ಲಾ ಒಂಬತ್ತು ಮೃತದೇಹಗಳನ್ನು ಎಂಬಾಮಿಂಗ್ ಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಎಂಬಾಮ್ ಮಾಡಿದ ನಂತರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಆಂಬ್ಯುಲೆನ್ಸ್‌ಗಳಲ್ಲಿ ಸಾಗಿಸಲಾಗುವುದು. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಜಾಗವನ್ನು ಕಾಯ್ದಿರಿಸಲಾಗಿದೆ. ಮೃತರ ವಿವರಗಳನ್ನು ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ರಕ್ಷಿಸಲಾದ ಎಲ್ಲಾ 13 ಚಾರಣಿಗರು ಇಂದು ಸಂಜೆಯೊಳಗೆ ಬೆಂಗಳೂರು ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯರೂ ಸೇರಿದಂತೆ ಎಂಟು ಚಾರಣಿಗರನ್ನು ಬುಧವಾರ ರಕ್ಷಿಸಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ರಕ್ಷಿಸಲ್ಪಟ್ಟ ಐವರು ಚಾರಣಿಗರನ್ನು ಇಂದು ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ಏರ್‌ಲಿಫ್ಟ್ ಮಾಡಲಾಗಿದೆ. ಬುಧವಾರ ಐವರು ಚಾರಣಿಗರ ಮೃತದೇಹಗಳನ್ನು ವಿಮಾನದಲ್ಲಿ ಉತ್ತರಕಾಶಿಗೆ ರವಾನಿಸಲಾಗಿದ್ದು, ಗುರುವಾರ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಇನ್ನೂ ನಾಲ್ಕು ಮೃತದೇಹಗಳನ್ನು ಹೊರತೆಗೆದು ಉತ್ತರಕಾಶಿಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರತುರಿ ಮತ್ತು ವಿಪತ್ತು ನಿರ್ವಹಣಾ ಕಾರ್ಯದರ್ಶಿ ರಂಜಿತ್ ಸಿನ್ಹಾ ಅವರನ್ನು ಭೇಟಿ ಮಾಡಿದ ಸಚಿವರು, ವಿಪತ್ತಿನ ಸಮಯದಲ್ಲಿ ತ್ವರಿತ ಪ್ರತಿಕ್ರಿಯೆಗಾಗಿ ಅವರಿಗೆ ಧನ್ಯವಾದ ಹೇಳಿದರು.
ಘಟನೆ ಬೆಳಕಿಗೆ ಬಂದ ನಂತರ, ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ಕೃಷ್ಣ ಬೈರೇಗೌಡ ಅವರು ಬುಧವಾರ ಡೆಹ್ರಾಡೂನ್‌ಗೆ ತೆರಳಿದ್ದರು.
ಚಾರಣಿಗರ ಸುರಕ್ಷಿತ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಮೃತರ ಮೃತದೇಹಗಳನ್ನು ಕೂಡಲೇ ರಾಜ್ಯಕ್ಕೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದರು.
ಕಂದಾಯ ಸಚಿವರ ಪ್ರಕಾರ, ಕರ್ನಾಟಕದ ಚಾರಣಿಗರ ತಂಡ ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಶಾಸ್ತ್ರತಾಲ್ ಮಯಲಿ ಎತ್ತರದ ಪ್ರದೇಶದಲ್ಲಿ ಚಾರಣ ಆರಂಭಿಸಿದೆ. ಗಮ್ಯಸ್ಥಾನ ತಲುಪಿದ ನಂತರ, ತಂಡವು ಮತ್ತೆ ಶಿಬಿರಕ್ಕೆ ಮರಳಲು ಪ್ರಯತ್ನಿಸಿದೆ. ಆದರೆ, ವಾಪಸ್ಸು ಬರುವಾಗ ಮಧ್ಯಾಹ್ನ 2 ಗಂಟೆ ವೇಳೆಗೆ ಬಿರುಗಾಳಿ ಬೀಸಿದ್ದರಿಂದ ವಾತಾವರಣ ಸಂಪೂರ್ಣ ಹದಗೆಟ್ಟಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.