ವಿಜಯಪುರ: ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಸಲು ಒತ್ತಾಯಿಸಿ, ನಕಲಿ ಕಳಪೆ ಮಾರಾಟ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆಯ ಮೇರೆಗೆ ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳನ್ನು ಇಳಿಸಲು ಆಗ್ರಹಿಸಿ, ಕಳಪೆ ಹಾಗೂ ನಕಲಿ ಬಿತ್ತನೆ ಬೀಜ -ರಸಗೊಬ್ಬರಗಳ ಮಾರಾಟವನ್ನು ತಡೆಗಟ್ಟಲು. ಕೃತಕ ಅಭಾವ ಸೃಷ್ಟಿಸಿ ಕಾಳಸಂತೆ ಮಾರಾಟದ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ವಿಜಯಪುರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಮಾತನಾಡಿ, ಬಲವಂತದ ಸಾಲ ವಸೂಲಾತಿ ನಿಲ್ಲಬೇಕು. ಬರ ಪರಿಹಾರದ ಹಣವನ್ನು ಸಾಲಕ್ಕೆ ಕಟಾಯಿಸಿಕೊಳ್ಳಬಾರದು. ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸಬೇಕು ಮತ್ತು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ರಾಜ್ಯ, ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಲಾಗಿದೆ. ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಅನುಭವಿಸಿತ್ತು. ಯಾವುದೇ ಅರ್ಥ ಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ ಗೊಬ್ಬರದ ವ್ಯಾಪಾರಿಗಳು ಶೋಷಣೆ ಮಾಡದಂತೆ ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘದ ಜಿಲ್ಲಾಧ್ಯಕ್ಷೆ ಭಾರತಿ ವಾಲಿ ಮಾತನಾಡಿ, ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಭಿನೇಶ ಮಣೂರ, ಎ.ಆರ್.ಮುಂಜಣ್ಣಿ, ನಿತ್ಯಾನಂದ ಸಾಗರ, ಎಮ್.ಎ.ಜಮಾದಾರ, ಅನುಸೂಯಾ ಹಜೇರಿ, ಶಮಶಾದ ಬೇಗಂ, ಸಾಹೇಬಿ ಶೇಖ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಕೆಗೆ ಪ್ರಾಂತ ರೈತ ಸಂಘ ಆಗ್ರಹ
Related Posts
Add A Comment

