ವಿಜಯಪುರ: ಎಸ್ ಎಸ್ ಎಲ್ ಸಿ ೨ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ:೨ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ ೧೪ ರಿಂದ ೨೨ರ ವರೆಗೆ ಜಿಲ್ಲೆಯಲ್ಲಿ ಒಟ್ಟು ೨೬ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸುಮಾರು ೮,೦೬೦ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಕುಡಿಯುವ ಶುದ್ಧ ನೀರು, ಬೆಂಚ್, ಮಧ್ಯಾöಹ್ನ ಬಿಸಿಯೂಟ, ಸಾರಿಗೆ ವ್ಯವಸ್ಥೆ ಹಾಗೂ ವೈಧ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಪರೀಕ್ಷಾ ದಿನಗಳಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ತಹಶೀಲ್ಧಾರರು, ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮಗೆ ವಹಿಸಿಕೊಟ್ಟ ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೆ ನಿರ್ವಹಿಸಬೇಕು ತಪ್ಪಿದಲ್ಲಿ ಪರೀಕ್ಷಾ ಮಂಡಳಿಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದರೊಂದಿಗೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗ ರಿಷಿ ಆನಂದ ಮಾತನಾಡಿ, ಪರೀಕ್ಷಾ ದಿನಗಳಂದು ಹೆಸ್ಕಾಂ ಇಲಾಖೆಯು ಸಮರ್ಪಕವಾಗಿ ವಿದ್ಯುತ್ ಪೂರೈಸುವುದರೊಂದಿಗೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷಾ ಕೊಠಡಿ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥ್ಥಾನಿಕ ಜಾಗೃತ ದಳ ಹಾಗೂ ಮೊಬೈಲ್ ಸ್ವಾದೀನ ದಳಗಳ ಅಧಿಕಾರಿಗೆಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟು ನಿಟ್ಟಿನ ಪಾಲಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಕ್ಯಾಮಾರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತು ನಿಗಾ ವಹಿಸಬೇಕು, ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಅದಕ್ಕೆ ಅನುಗುಣವಾಗಿ ವಿದ್ಯುತ್ ತೊಂದರೆಯಾಗದ ರೀತಿ ಜನರೇಟರ್ ಇಲ್ಲವೆ ಯು.ಪಿ.ಎಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷ ಕೊಠಡಿಯ ಹೊರಗಡೆಯ ೨೦೦ಮೀ ಅಳತೆಯಲ್ಲಿ ನಿಷೇಧಾಜ್ಷೆ ಜಾರಿಇದ್ದು, ಅದಕ್ಕೆ ಅವಶ್ಯಕವಾದ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲು ಪೋಲಿಸ್ ಅಧಿಕಾರಿಗಳು ಸಹಕಾರ ಕೋರುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಉಮಾದೇವಿ ಸೊನ್ನದ, ಪೋಲಿಸ್ ಅಧಿಕಾರಿ ಪರಮೇಶ್ವರ ಕವಟಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಹೆಸ್ಕಾಂ ಅಧಿಕಾರಿಗಳು ತಾಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಬಿ.ಇ.ಒ ಗಳು, ಬಿ.ಆರ್.ಸಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಪಾರದರ್ಶಕ ಪರೀಕ್ಷೆಗಾಗಿ ಕಟ್ಟುನಿಟ್ಟಿನ ಕ್ರಮ :ಡಿಸಿ ಟಿ.ಭೂಬಾಲನ್
Related Posts
Add A Comment

