ಮುದ್ದೇಬಿಹಾಳ: ಚಿಮ್ಮಲಗಿ ಏತ ನೀರಾವರಿ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಅವಾರ್ಡ ಪ್ರತಿ ನೀಡಿ, ಅಪೂರ್ಣಗೊಂಡಿರುವ ಕಾಲುವೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ತಾಲೂಕಿನ ನಾಲತವಾಡ ಬಳಿಯ ಅಮರೇಶ್ವರ ದೇವಸ್ಥಾನದ ಆವರಣದಲ್ಲಿ ಜೂ೮ ರಿಂದ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಹೋರಾಟಗಾರ, ಕಾಂಗ್ರೇಸ್ ಮುಖಂಡ ಶಿವಾನಂದ ವಾಲಿ ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವದಾಗಿ ಎಚ್ಚರಿಕೆ ಕೂಡ ನೀಡಿದ್ದೆ. ನಮ್ಮ ಮನವಿಗೆ ಇದುವರೆಗೆ ಯಾವುದೇ ರೀತಿಯಿಂದ ಸ್ಪಂದಿಸದ ಕಾರಣ ಸತ್ಯಾಗ್ರಹ ಪ್ರಾರಂಭಿಸುತ್ತಿದ್ದೇನೆ. ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು, ರೈತರು, ಹೋರಾಟಗಾರರು ಬೆಂಬಲಿಸುವದಾಗಿ ತಿಳಿಸಿದ್ದಾರೆ ಎಂದರು.
Subscribe to Updates
Get the latest creative news from FooBar about art, design and business.
Related Posts
Add A Comment
