ತಿಕೋಟಾ: ಗ್ರಾಮೀಣ ಭಾಗದಲ್ಲಿ ಶಿಕ್ಷಣ ಪಡೆಯುವ ಮಕ್ಕಳಿಗೆ ಒಳ್ಳೆಯ ಸೌಕರ್ಯ ಒದಗಿಸಿದರೆ ಉತ್ತಮ ಸಾಧನೆ ಮಾಡುತ್ತಾರೆ ಎಂದು ಮುಂಬೈ ಮೂಲದ ತಪಸಿದಾಸ, ತುಳಸದಾಸ ಮತ್ತು ವೃಜದಾಸ ಚಾರಿಟೇಬಲ್ ಟ್ರಸ್ಟನ ಸಂಯೋಜಕ ವಿಶ್ವನಾಥ ಸಿಂದಗಿ ಹೇಳಿದರು.
ತಾಲ್ಲೂಕಿನ ಬಾಬಾನಗರ ಗ್ರಾಮದ ಹಿರೇಕುರುಬರ ವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮದೇವರಹಟ್ಟಿ ಗ್ರಾಮದ ಪೂಜೇರಿ ವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಟ್ರಸ್ಟ ವತಿಯಿಂದ ಶುಕ್ರವಾರ ಮಕ್ಕಳಿಗೆ ನೋಟಬುಕ್ ವಿತರಿಸಿ ಅವರು ಮಾತನಾಡಿದರು.
ಮಕ್ಕಳು ಉತ್ತಮವಾಗಿ ಶಿಕ್ಷಣ ಪಡೆದು ಶೈಕ್ಷಣಿಕವಾಗಿ ಮಾಡುವ ಸಾಧನೆಯೇ ಸಮಾಜಕ್ಕೆ ಕೊಡುವ ದೊಡ್ಡ ಕೊಡುಗೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಎಸ್.ಎನ್.ತಡಲಗಿ, ಎಸ್.ಎಂ.ಕಠಾರೆ, ಎಸ್.ವೈ.ಬಾಗೆನವರ, ಎಚ್.ಎಂ.ಕಾಲೆಬಾಗ್, ಎಸ್.ಐ.ಬಾಗಲಕೋಟ, ಎಸ್.ಎಸ್.ಜಂಗಮಶೆಟ್ಟಿ, ಗ್ರಾಪಂ ಅಧ್ಯಕ್ಷರು, ಸದಸ್ಯರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಮತ್ತು ಮಕ್ಕಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

