ದೇವರಹಿಪ್ಪರಗಿ: ಇಂಗಳಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆದು ಮಾರಾಟಗಾರರ ಮೇಲೆ ಕಾನೂನು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಹಿಳೆಯರು ಹಾಗೂ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ)ಯ ಕಾರ್ಯಕರ್ತರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ಇಂಗಳಗಿ ಗ್ರಾಮದ ಮಹಿಳೆಯರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ ಮಾತನಾಡಿ, ಅಕ್ರಮ ಮದ್ಯ ಸುಮಾರು ವರ್ಷಗಳಿಂದ ಗ್ರಾಮದ ಮನೆ, ಕಿರಾಣಿ ಅಂಗಡಿ, ೧೦ರಿಂದ ೧೨ ಪಾನ್ ಶಾಪ್‌ಗಳಲ್ಲಿ ನಿರ್ಭಯವಾಗಿ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸಿಂದಗಿ ತಾಲ್ಲೂಕು ಅಬಕಾರಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮಾರಾಟಗಾರರು ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪ್ರತಿತಿಂಗಳ ಹಣ ನೀಡುತ್ತೇವೆ ಯಾರು ತಡೆಯುತ್ತಾರೆ ನೋಡೋಣ ಎಂದು ಸವಾಲು ಹಾಕುತ್ತಾರೆ. ಸಾಕಷ್ಟು ಬಾರಿ ಮನವಿ ಮಾಡಿದರೂ ಅಬಕಾರಿ ಇಲಾಖೆ ಕೈಕಟ್ಟಿ ಕುಳಿತಿದ್ದು ನೋಡಿದರೆ ಮಾರಾಟಗಾರರಿಂದ ಹಣ ವಸೂಲಿ ಮಾಡುತ್ತಿರುವುದು ಮೇಲುನೋಟಕ್ಕೆ ಸತ್ಯವೇನಿಸುತ್ತದೆ. ಕೂಡಲೇ ತಾಲ್ಲೂಕು ದಂಡಾಧಿಕಾರಿಗಳು ಅಕ್ರಮ ಮಾರಾಟಗಾರರ ಮೇಲೆ ಶಿಸ್ತು ಕ್ರಮ ಹಾಗೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು. ಇಲ್ಲದಿದ್ದರೇ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ರೇಣುಕಾ ಕಟ್ಟಿಮನಿ, ಯಲ್ಲವ್ವ ಮಾದರ, ಸಾವಿತ್ರಿ ಕಟ್ಟಿಮನಿ, ಭೀಮವ್ವ ಮಾದರ, ಮಾನಂದಾ ಕಟ್ಟಿಮನಿ, ಯಲ್ಲವ್ವ ಕನ್ನೋಳ್ಳಿ, ಸೋಮವ್ವ ರತ್ನಾಕರ, ಭಾರತಿ ಭಾವಿಮನಿ, ರುಕ್ಮವ್ವ ಕಟ್ಟಿಮನಿ, ನಂದವ್ವ ಹೊಸಮನಿ, ಚಂದ್ರವ್ವ ಭಾವಿಮನಿ, ಚಂದ್ರವ್ವ ಕನ್ನೋಳ್ಳಿ, ಅನಿತಾ ಭಾವಿಮನಿ, ರವಿ ಶಿರವಾಳ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

