Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಗತ್ಯ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಬಾಲಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಗತ್ಯ :ಡಿಸಿ ಟಿ.ಭೂಬಾಲನ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬಾಲಕಾರ್ಮಿಕತೆ ಅನಿಷ್ಠ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.
ಬುಧವಾರ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ನಿಷೇಧಿಸಲಾಗಿದೆ. ಇದೊಂದು ಅಪರಾಧವಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಿ, ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಬಾಲಕಾರ್ಮಿಕ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ – ೧೦೯೮ಕ್ಕೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಕಾರ್ಮಿಕ ಇಲಾಖೆಯು ಸೇರಿದಂತೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ರಕ್ಷಿಸಿದ ಮಕ್ಕಳನ್ನು ಬಾಲಮಂದಿರಕ್ಕೆ ದಾಖಲಿಸಿ ಅವರ ಪುನರ್ವಸತಿ ಕಲ್ಪಿಸಿ ಅವರಿಗೆ ಪೂರಕವಾದ ಶಿಕ್ಷಣ, ಕೌಶಲಗಳ ತರಬೇತಿ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕ್ರೋಢೀಕರಿಸಿಕೊಂಡು ಆ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಬಾಲಕಾರ್ಮಿಕ ಕಾರ್ಮಿಕ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಶಾಲಾ ಮುಖ್ಯಸ್ಥರೊಂದಿಗೆ ಸಮನ್ವಯ ಸಾಧಿಸಬೇಕು. ವಲಸೆ ಕಾರ್ಮಿಕ ಕುಟುಂಬಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅವರ ಮಕ್ಕಳ ಶಿಕ್ಷಣ, ಮೂಲಭೂತ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಕ್ಕಳ ಭವಿಷ್ಯ ಸುಂದರವಾಗಿಸಲು ಬಾಲಕಾರ್ಮಿಕತೆ ಪಿಡುಗನ್ನು ತೊಲಗಿಸಬೇಕು.
ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ರಾಮನಗೌಡ ಹಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದ ನೀಲಮ್ಮಾ ಖೇಡಗಿ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಎಸ್.ಜಿ. ಕೈನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೋ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಜಿ. ಕುಲಕರ್ಣಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.